ನಾಳೆ(ನ.8): ರಾಮಕುಂಜ ವಿದ್ಯಾಸಂಸ್ಥೆಯಲ್ಲಿ ಇಸ್ರೋ ಸಹಯೋಗದಲ್ಲಿ ’ಸ್ಪೇಸ್ ಆನ್ ವೀಲ್ಸ್’

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆ, ರಾಮಕುಂಜ ಇದರ ವತಿಯಿಂದ ದಕ್ಷಿಣ ಕನ್ನಡ ವಿಜ್ಞಾನ ಪ್ರತಿಷ್ಠಾನ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದ.ಕ.ಘಟಕ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಬೆಂಗಳೂರು(ಇಸ್ರೋ)ಇವರ ಸಂಯುಕ್ತ ಆಶ್ರಯದಲ್ಲಿ ’ಸ್ಪೇಸ್ ಆನ್ ವೀಲ್ಸ್’ ಕಾರ್ಯಕ್ರಮ ನ.8ರಂದು ಬೆಳಿಗ್ಗೆ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಹಾಗೂ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.


ಪಿಡಬ್ಲ್ಯುಡಿ ಇಂಜಿನಿಯರ್ ಪ್ರಮೋದ್‌ಕುಮಾರ್ ಕೆ.,ಉದ್ಘಾಟಿಸಲಿದ್ದು ದ.ಕ.ವಿಜ್ಞಾನ ಪ್ರತಿಷ್ಠಾನದ ಉಪಾಧ್ಯಕ್ಷ ಕೇಶವ ಎ.,ಅಧ್ಯಕ್ಷತೆ ವಹಿಸಲಿದ್ದಾರೆ. ಇಸ್ರೋ ವಿಜ್ಞಾನಿ ಶ್ರೀನಿವಾಸ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here