ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ನೇಮಿಸುವಂತೆ ದತ್ತಿ ಇಲಾಖೆಯಿಂದ ಅರ್ಜಿ ಆಹ್ವಾನ

0

ಪುತ್ತೂರು: ಇತಿಹಾಸ ಪ್ರಸಿದ್ಧ ಗಯಾಪದ ಕ್ಷೇತ್ರ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯ ಮತ್ತು ಕಡಬ ತಾಲೂಕಿನ ಆಲಂಕಾರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ನೂತನ ವ್ಯವಸ್ಥಾಪನಾ ಸಮಿತಿಗಳ ಸದಸ್ಯರ ನೇಮಕಕ್ಕೆ ಸರಕಾರ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.

ನ.3ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಲಿಂಗೇಶ್ವರ ದೇವಸ್ಥಾನ ಮತ್ತು ನ.20ಕ್ಕೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧಿಕಾರಾವಧಿ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಸದರಿ ದೇವಾಲಯಗಳ ಸೆಕ್ಷನ್ 25ರ ಅನ್ವಯ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಲು ಅ.13ರಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ನಿರ್ಣಯಿಸಿದಂತೆ ಧಾರ್ಮಿಕ ದತ್ತಿ ಇಲಾಖಾ ಆಯುಕ್ತರು ಈ ಕುರಿತು ಅಧಿಸೂಚನೆ ಸಹಿತ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here