ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ

0

ಮಂಗಳೂರು/ಪುತ್ತೂರು: ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿ.ವಿ.ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ನ.8ರಂದು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವಿ.ಸದಾನಂದ ಗೌಡ ಅವರು, ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಹೆಚ್ಚಿನದ್ದಕ್ಕೆ ಆಸೆಪಡುವುದಿಲ್ಲ ಎಂದು ಹೇಳಿದ್ದಾರೆ. ಚುನಾವಣಾ ರಾಜಕೀಯದಲ್ಲಿ ಮುಂದುವರೆಯದಿರಲು ನಿರ್ಧರಿಸಿದ್ದೇನೆ, ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. 10 ವರ್ಷ ಶಾಸಕನಾಗಿ, 20 ವರ್ಷಗಳ ಕಾಲ ಸಂಸದನಾಗಿ ಒಂದು ವರ್ಷ ಮುಖ್ಯಮಂತ್ರಿಯಾಗಿ 4 ವರ್ಷ ಪಕ್ಷದ ರಾಜ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here