ಸಂತ ಫಿಲೋಮಿನಾ ಪ್ರೌಢಶಾಲಾ ವಿದ್ಯಾರ್ಥಿ ನಿಪೇಕ್ಷ್ ಗುಂಡು ಎಸೆತ ಮತ್ತು ಈಟಿ ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ, ಉಪನಿರ್ದೇಶಕರ ಕಛೇರಿ ಮೂಡಬಿದ್ರೆ ಮತ್ತು ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆಯ ವಿದ್ಯಾರ್ಥಿ ನಿಪೇಕ್ಷ್ ಈಟಿ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ ಆತಿಥ್ಯದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಕಲ್ಲಾರೆ ರಾಘವೇಂದ್ರ ಮಠದ ಬಳಿಯ ನಿವಾಸಿ ಚಂದ್ರಶೇಖರ್ ಹಾಗೂ ಸವಿತಾ ದಂಪತಿಗಳ ಸುಪುತ್ರ.

LEAVE A REPLY

Please enter your comment!
Please enter your name here