ನ.15 ಮಂಗಳೂರಿನಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಮಾವೇಶ – ವಿಟ್ಲ- ಉಪ್ಪಿನಂಗಡಿ ಬ್ಲಾಕ್ ನಿಂದ ಹಲವರು ಭಾಗಿ – ಡಾ. ರಾಜಾರಾಮ್ ಕೆ.ಬಿ

0

ವಿಟ್ಲ: ಮಂಗಳೂರಿನಲ್ಲಿ ನಡೆಯಲಿರುವ ನ.15ರಂದು ಮಡೆಯಲಿರುವ ಪಂಚಾಯತ್ ರಾಜ್ ಪ್ರತಿನಿಧಿಗಳ ಸಮಾವೇಶಕ್ಕೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಿಂದ ಹೆಚ್ಚಿನ ಜನರು ಭಾಗವಹಿಸಲಿದ್ದು, ಮುಂದಿನ ಚುನಾವಣೆಗೆ ಇದು ಪೂರಕವಾದ ಕಾರ್ಯಕ್ರಮವಾಗಿದೆ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ ಅವರು ತಿಳಿಸಿದರು.

ಅವರು ವಿಟ್ಲದಲ್ಲಿರುವ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಅವರ ಸಾರಥ್ಯದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮವನ್ನು ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವು ನಾಯಕರು ಭಾಗವಹಿಸಲಿದ್ದಾರೆ. ಈ ಸಮಾವೇಶ ಮುಂದಿನ ಚುನಾವಣೆಗೆ ಮುನ್ನುಡಿ ಬರೆಯಲಿದ್ದು, ಪಕ್ಷ ಸಂಘಟನೆಗೆ ಇದು ಸಹಕಾರಿಯಾಗಲಿದೆ. ಗ್ರಾ.ಪಂ ಸದಸದಯರುಗಳು, ಮಾಜಿ ಸದಸ್ಯರುಗಳು, ಮೊದಲಾದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್ ಮಾತನಾಡಿ ಪಂಚಾಯತ್ ರಾಜ್ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗೊಳಿಸಲಾಗಿದೆ. ಇದೊಂದು ಮಹತ್ವದ ಕಾರ್ಯಕ್ರಮವಾಗಿದ್ದು, ಭವಿಷ್ಟ ಪಕ್ಷದ ಸಂಘಟನೆಗೆ ಇದು ಪೂರಕವಾಗಿರುವ ಸಮಾವೇಶವಾಗಿದೆ. ರಾಜೀವ ಗಾಂಧಿಯವರ ಕನಸು ಈ ಸಂಘಟನೆಗಳ ಮೂಲಕ ಯಶಸ್ವಿಯಾಗಿದೆ. ಗ್ರಾಮೀಣ ಭಾಗ ಅಭಿವೃದ್ಧಿ ಹೊಂದಲು ಪಂಚಾಯತ್ ರಾಜ್ ಸಂಘಟನೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ವಕ್ತಾರರಾದ ರಮಾನಾಥ ವಿಟ್ಲ, ರಾಜೀವ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಅಧ್ಯಕ್ಷ ಹಸೈನಾರ್ ನೆಲ್ಲಿಗುಡ್ಡೆ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ವಿಕೆಎಂ ಅಶ್ರಪ್, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ, ಎಕೆಎಂ ಮೊಹಮ್ಮದ್, ರಶೀದ್ ವಿ.ಎ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here