





ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ನಡೆಯಿತು.
ಸವಣೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ.ವಿ.ಸೂರ್ಯನಾರಾಯಣರವರು ವಿದ್ಯಾರ್ಥಿಗಳಿಗೆ ಭವಿಷ್ಯದ ಅವಕಾಶಗಳು ಹಾಗೂ ಪರೀಕ್ಷಾ ತಯಾರಿಯ ಬಗ್ಗೆ ಮಾಹಿತಿ ನೀಡಿದರು. ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್‌ರವರು ಕಾರ್ಯಕ್ರಮ ಸಂಘಟಿಸಿ, ಸ್ವಾಗತಿಸಿದರು. ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.











