ನ.16: ಪುತ್ತೂರಿನಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ – ಸಂಸದರಿಂದ ರೈಲ್ವೇ ಅಭಿವೃದ್ಧಿ ಪ್ರಗತಿ ಪರಿಶೀಲನೆ

0

ಪುತ್ತೂರು: ನೆಹರುನಗರದ ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನ.16ರಂದು ನಡೆಯಲಿದೆ. ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅಭಿವೃದ್ದಿ ಪ್ರಗತಿ ಪರಿಶೀಲನೆ ನಡೆಯಲಿದೆ.
ವಿವೇಕಾನಂದ ಕಾಲೇಜು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಸರಕಾರದಿಂದ ಅನುದಾನ ಬಿಡುಗಡೆಗೊಂಡಿದ್ದು, ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಆ ಬಳಿಕ ಅವರು ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ವಿದ್ಯುತ್ ರೈಲು ಸಂಚಾರಕ್ಕಾಗಿ ನಡೆದ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here