ನ.19: ಕಲ್ಲೇಗ ಮಸೀದಿ ವಠಾರದಲ್ಲಿ ವೈದ್ಯಕೀಯ ತಪಾಸಣಾ ಶಿಬಿರ, ಆರೋಗ್ಯ ಜಾಗೃತಿ ಕಾರ್ಯಕ್ರಮ

0

ಪುತ್ತೂರು:ಹಿದಾಯ ಫೌಂಡೇಶನ್ ಮಂಗಳೂರು, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಹಾಗೂ ಎನ್‌ಆರ್‌ಐ ಪ್ರವಾಸಿಗರು ಮತ್ತು ಕಲ್ಲೇಗ ಜುಮ್ಮಾ ಮಸೀದಿ ಇದರ ಸಂಯುಕ್ತ ಆಶ್ರಯದಲ್ಲಿ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮ ನ.19ರಂದು ಕಲ್ಲೇಗ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಕಲ್ಲೇಗ ಜುಮ್ಮಾ ಮಸೀದಿಯ ಗೌರವಾಧ್ಯಕ್ಷ ಬಿ.ಎ ಶಕೂರ್ ಹಾಜಿ ಕಲ್ಲೇಗ ಹೇಳಿದರು.


ನ.16ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಅಶೋಕ್ ಕುಮಾರ್ ರೈ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಹಿದಾಯ ಫೌಂಡೇಶನ್‌ನ ಅಧ್ಯಕ್ಷ ಜಿ.ಮೊಹಮ್ಮದ್ ಹನೀಫ್ ಹಾಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಲ್ಲೇಗ ಜುಮ್ಮಾ ಮಸೀದಿಯ ಮುದರ್ರಿಸ್ ಶಾಫಿ ಫೈಝಿ ಇರ್ಫಾನಿ ದುಆ: ನೆರವೇರಿಸಲಿದ್ದಾರೆ. ಮಾಸ್ಟರ್ ಪ್ಲಾನರಿಯ ಎಸ್.ಕೆ ಆನಂದ್, ಯೆನೆಪೋಯ ಡೆಂಟಲ್ ಕಾಲೇಜಿನ ಪಬ್ಲಿಕ್ ಹೆಲ್ತ್ ಡೆಂಟಿಸ್ಟ್ ಡಾ. ಇಮ್ರಾನ್ ಪಾಷ, ಕಲ್ಲೇಗ ಜುಮ್ಮಾ ಮಸೀದಿ ಅಧ್ಯಕ್ಷ ಕೆ.ಪಿ ಮೊಹಮ್ಮದ್ ಹಾಜಿ ಆತಿಥಿಗಳಾಗಿ ಆಗಮಿಸಲಿದ್ದಾರೆ.


ಶಿಬಿರದಲ್ಲಿ ಸಾಮಾನ್ಯ ಪರೀಕ್ಷೆ, ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಹೆರಿಗೆ ಮತ್ತು ಪ್ರಸೂತಿ ಹಾಗೂ ಮಕ್ಕಳ ತಜ್ಞರು ಭಾಗವಹಿಸಲಿದ್ದಾರೆ. ರಕ್ತದೊತ್ತಡ, ಮಧುಮೇಹ ಪರೀಕ್ಷೆಯನ್ನು ಶಿಬಿರದಲ್ಲಿ ನಡೆಸಲಾಗುವುದು. ಮಹಿಳೆಯರಿಗಾಗಿ ಅತ್ಯಾಧುನಿಕ ತಂತ್ರಜ್ಞಾನದ ಮೊಬೈಲ್ ಕ್ಲಿನಿಕ್ ಬಸ್‌ನಲ್ಲಿ ತಪಾಸಣಾ ಸೌಲಭ್ಯವಿದೆ. ಔಷಧಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು.


ಕಲ್ಲೇಗ ಜುಮ್ಮಾ ಮಸೀದಿಯ ಕೋಶಾಧಿಕಾರಿ ಅಶ್ರಫ್ ಹಾಜಿ ಕಲ್ಲೇಗ, ಸಲಹೆಗಾರ ಹನೀಫ್ ಹಾಜಿ ಉದಯ, ಅಲ್ ಅಮೀನ್ ಯಂಗ್ ಮೆನ್ಸ್ ಅಸೋಷಿಯೇಷನ್ ಅಧ್ಯಕ್ಷ ರಶೀದ್ ಮುರ, ಎನ್‌ಆರ್‌ಐ ಇದರ ನಿಕಟಪೂರ್ವ ಅಧ್ಯಕ್ಷ ಸುಲೈಮಾನ್ ಮೌಲವಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here