ಪುತ್ತೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಂಚಲನ ಸಮಿತಿ ಕೇಂದ್ರ ಮಂಗಳೂರು, ಮಹಾಲಿಂಗೇಶ್ವರ ಐಟಿಐ ಕೊಂಬೆಟ್ಟು ಮತ್ತು ಅರಕ್ಷಕ ನಗರ ಠಾಣೆ ಪುತ್ತೂರು ಇದರ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಾಗಾರ ನ.16ರಂದು ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯಲ್ಲಿ ನಡೆಯಿತು.
ಪ್ರಧಾನ ವ್ಯವಹಾರಿಕ ನ್ಯಾಯಾಧೀಶೆ ಮತ್ತು ಜೆಎಂಎಫ್ ಪುತ್ತೂರು ಹಾಗು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿರುವ ಅರ್ಚನಾ ಕೆ.ಉಣ್ಣಿತಾನ್ ಅವರು ಕಾರ್ಯಾಗಾರ ಉದ್ಘಾಟಿಸಿದರು. 2ನೇ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಮತ್ತು ಜೆ.ಎಂ.ಎಫ್ .ಸಿ ಪುತ್ತೂರು ಇದರ ಯೋಗೇಂದ್ರ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಆಂಜನೇಯ ರೆಡ್ಡಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ. ಶ್ರೀ ಮಹಾಲಿಂಗೇಶ್ವರ ಐಟಿಐ ನಿರ್ದೇಶಕರಾಗಿರುವ ವಕೀಲ ಜಯರಾಮ ಚಿಲ್ತಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಪ್ರಕಾಶ್ ಪೈ, ಕಾರ್ಯಕ್ರಮ ಸಂಯೋಜಕಿ ಪ್ಯಾರಾಲೀಗಲ್ ವಾಲಂಟಿಯರ್ ವತ್ಸಲ ನಾಯಕ್, ರೋಹಿಣಿ ರಾಘವ ಆಚಾರ್ಯ, ಸಾಹಿರ ಜುಬೈರ್ ಉಪಸ್ಥಿತರಿದ್ದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ಹರಿಣಾಕ್ಷಿ ಜೆ ಶೆಟ್ಟಿ, ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು..