ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ನಡೆಯುವ ತಾಲೂಕು ಮಟ್ಟದ ಮದ್ಯವರ್ಜನ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆಯು ನ.18ರಂದು ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ತಾಲೂಕು ಜನಜಾಗೃತಿ ಅಧ್ಯಕ್ಷ ಲೋಕೇಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಯಿತು.
ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ಆಡಳಿತ ಮುಖ್ಯಸ್ಥ ಅಜಿತ್ ಕುಮಾರ್ ಜೈನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪುತ್ತೂರು ತಾಲೂಕಿನ ಯೋಜನಾಧಿಕಾರಿ ಶಶಿಧರ ಎಮ್ ಮದ್ಯವರ್ಜನ ಶಿಬಿರದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು. ನಗರ ಸಭೆಯ ಮಾಜಿ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ ಪುತ್ತೂರು ತಾಲೂಕಿನಲ್ಲಿ ಈ ಒಂದು ಒಳ್ಳೆಯ ಕಾರ್ಯಕ್ರಮ ಇಟ್ಟು ಕೊಂಡದ್ದಕ್ಕೆ ಪ್ರಥಮವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಅಭಿನಂದನೆಗಳು. ಈ ಶಿಬಿರಕ್ಕೆ ಸರ್ವರ ಸಹಕಾರ ಅತ್ಯಗತ್ಯ. ಶಿಬಿರವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಾಲಯದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ೩ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಲಾಯಿತು. ಮಹಾಬಲ ರೈ ಒಳತ್ತಡ್ಕ ಮಾತನಾಡಿ ಜೀರ್ಣೋದ್ಧಾರಕ್ಕೆ ಧನಸಹಾಯ ಮಾಡಿದ ಡಾ|ವೀರೇಂದ್ರ ಹೆಗ್ಗಡೆಯವರಿಗೆ ಧನ್ಯವಾದ ಅರ್ಪಿಸಿದರು. ಅನಾರೋಗ್ಯದಿಂದಿರುವ ಸಂಘದ ಸದಸ್ಯೆ ಜಲಜಾಕ್ಷಿ ಇವರ ಪತಿ ಶೀನ ನಾಯ್ಕ್ ಇವರಿಗೆ ವಾಟರ್ ಬೆಡ್ ಹಾಗೂ ಸಂಘದ ಸದಸ್ಯ ರಾಘವೇಂದ್ರ ಇವರ ತಂದೆ ವೀರಪ್ಪ ಆಚಾರ್ಯ ರಿಗೆ ವಾಕರ್ ನೀಡಲಾಯಿತು. ಮದ್ಯವರ್ಜನ ಶಿಬಿರದ ಯಶಸ್ವಿಗೆ ಚರ್ಚೆ ನಡೆಯಿತು. ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕಿನ ಜನಜಾಗೃತಿಯ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭೆಯ ಸದಸ್ಯ ವಸಂತ, ಸಂಪನ್ಮೂಲ ವ್ಯಕ್ತಿ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ನಗರಸಭೆಯ ಮಾಜಿ ಸದಸ್ಯ ರಾಜೇಶ್ ಬನ್ನೂರು, ಇಂಡೇನ್ ಗ್ಯಾಸ್ನ ಮಾಲಕ ರಾಜೇಶ್ ಬೂಡಿಯರ್, ಜಿಲ್ಲಾ ನಿರ್ದೇಶಕ ಪ್ರವೀಣ್, ಶಿಬಿರದ ವೈದ್ಯಾಧಿಕಾರಿ ಡಾ.ನಾರಾಯಣ ಭಟ್ ಉಪಸ್ಥಿತರಿದ್ದರು. ಕಸಬಾ ಒಕ್ಕೂಟದ ಸೇವಾ ಪ್ರತಿನಿಧಿ ಪೂಜಾ ವಸಂತ್ ಪ್ರಾರ್ಥಿಸಿದರು. ಪರ್ಲಡ್ಕ ಒಕ್ಕೂಟದ ಸೇವಾಪ್ರತಿನಿಧಿ ಪುಪ್ಷಲತಾ ಸ್ವಾಗತಿಸಿದರು. ಮೇಲ್ವಿಚಾರಕಿ ಶೃತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.