





ಬಡಗನ್ನೂರು: ಬಡಗನ್ನೂರು ಗ್ರಾ ಪಂ ನ ವಿಶೇಷ ಗ್ರಾಮ ಸಭೆಯು ನ.20 ರಂದು ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆ 2023-24ನೇ ಸಾಲಿನ ಗ್ರಾ. ಪಂ ನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಸಭೆ ಇದಾಗಿದ್ದು, ಪುತ್ತೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಸಭಾಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಉದ್ಯೋಗ ಖಾತರಿ ಯೋಜನೆ ಫಲಾನುಭವಿಗಳು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿದೆ.









