ಪೆರಾಬೆ ಸರಕಾರಿ ಶಾಲಾ ’ವಿವೇಕ್’ ಕೊಠಡಿ ಉದ್ಘಾಟನೆ

0

ಪೆರಾಬೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಾಬೆ ಇಲ್ಲಿ ವಿವೇಕ್ ಅನುದಾನದಲ್ಲಿ ನಿರ್ಮಾಣಗೊಂಡ ನೂತನ 2 ಕೊಠಡಿಗಳ ಉದ್ಘಾಟನೆಯು ನಡೆಯಿತು.
ಪೆರಾಬೆ ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ಕೆ.,ಅವರು ಕೊಠಡಿಗಳನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸರಕಾರಿ ಶಾಲೆಗಳನ್ನು ಉಳಿಸುವಲ್ಲಿ ಸರಕಾರದ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಊರ ವಿದ್ಯಾಭಿಮಾನಿಗಳ ಪಾತ್ರ ಬಹಳ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಇಲಾಖೆ ಹಾಗೂ ಶಿಕ್ಷಕರ ಜೊತೆಗೆ ಸಮಾಜವೂ ಕೈಜೋಡಿಸಬೇಕಾಗುತ್ತದೆ ಎಂದರು.


ಕಡಬ ವಲಯದ ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್ ಶರ್ಮ, ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷೆ ವೇದಾವತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರೂ, ಪೆರಾಬೆ ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷರೂ ಆದ ಮೋಹನ್‌ದಾಸ್ ರೈ ಪರಾರಿ, ವಾರ್ಡ್ ಸದಸ್ಯೆ ಸುಶೀಲಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್ ನೆಲ್ಯಾಡಿ, ಪುತ್ತೂರು ತಾಲೂಕು ಕಾರ್ಯದರ್ಶಿ ಬಾಲಕೃಷ್ಣ, ಮುಖ್ಯಗುರುಗಳ ಜಿಲ್ಲಾ ಸಂಘದ ಅಧ್ಯಕ್ಷ ನಿಂಗರಾಜು ಕೆ.ಪಿ., ಸಿಆರ್‌ಪಿ ಪ್ರಕಾಶ್ ಬಾಕಿಲ ಶುಭಹಾರೈಸಿದರು. ಎಸ್‌ಡಿಎಂಸಿ ಅಧ್ಯಕ್ಷ ನೇಮಿರಾಜ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕಿ ಸುಚೇತಾಕುಮಾರಿ ಸ್ವಾಗತಿಸಿದರು. ಶಿಕ್ಷಕ ರಾಘವೇಂದ್ರ ಪ್ರಸಾದ್ ವಂದಿಸಿದರು. ಶಿಕ್ಷಕಿ ಹೇಮಲತಾಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here