ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನಕ್ಕೆ ಚಾಲನೆ

0

ಕಾಣಿಯೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನಕ್ಕೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21ರಂದು ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.


ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದ ಅಂಗವಾಗಿ ಏರ್ಡಿಸಿದ ಛಾಯಾಚಿತ್ರ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಉದ್ಘಾಟಿಸಿದರು. ಶಾಸಕರಾದ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸೇರಿದಂತೆ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here