ಕಾಣಿಯೂರು: ವಿದ್ಯಾರ್ಥಿ ದಿಸೆಯಲ್ಲಿ ನಾವು ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸುತ್ತಾ ಬ್ಯಾಂಕ್ ಆಫ್ ಬರೋಡದ ಕಾಣಿಯೂರು ಶಾಖೆಯ ಪ್ರಬಂಧಕ ಅತಿಥ್ ರೈ ಹೇಳುತ್ತಾ ವಿದ್ಯಾರ್ಥಿಗಳ ಶಿಸ್ತು ಬದ್ಧ ಪಥಸಂಚಲಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ತನ್ನ ಬಾಲ್ಯದ ಶಾಲಾ ದಿನದ ನೆನಪುಗಳು ಮರುಕಳಿಸಿತು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಸಂಚಾಲಕ ಜಯಸೂರ್ಯ ರೈ ಮಾದೋಡಿ ಮಾದೋಡಿಯವರು ಶುಭರೈಸಿದರು. ಮುಖ್ಯ ಅತಿಥಿ ಗಿರಿಶಂಕರ ಸುಲಾಯ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಸಾಧಕ ವಿದ್ಯಾರ್ಥಿಗಳು ಸೋತ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಆಗ ಮಾತ್ರ ನಾವು ಗೆದ್ದ ಸಂಭ್ರಮಕ್ಕೆ ಸಾರ್ಥಕತೆ ದೊರೆಯುತ್ತದೆ ಎಂದು ಹೇಳಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ನಾವೂರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ನಾಗೇಶ್ ರೈ ಮಾಳ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ ಎಂ ಬಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲಾ ಟ್ರಸ್ಟಿ ದೇವಿಕಿರಣ್ ರೈ ಮಾದೋಡಿ ಮತ್ತು ಹರಿಚರಣ್ ರೈ ಮಾದೋಡಿ, ಶಾಲಾ ಸಹ ಆಡಳಿತ ಅಧಿಕಾರಿ ಹೇಮ ನಾಗೇಶ್ ರೈ, ಅನಿತಾ ಜೆ ರೈ ಉಪಸ್ಥಿತರಿದ್ದರು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕದೊಂದಿಗೆ ಸರ್ವರನ್ನು ಸ್ವಾಗತಿಸಿದರು. ಮುಖ್ಯಗುರು ಸರಸ್ವತಿ ಎಂ ಧನ್ಯವಾದ ಸಮರ್ಪಿಸಿದರು. ಕುಮಾರಿ ಈಷಿತಾ ಪ್ರಾರ್ಥಿಸಿದರು. ಹಿರಿಯ ಶಿಕ್ಷಕಿ ವಿನಯ ವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಿದರು. ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಸಹಕರಿಸಿದರು.