ನ.24-25: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕನಸುಗಳು ಕಾರ್ಯಕ್ರಮ

0

ಪುತ್ತೂರು: ಪುತ್ತೂರು ತಾಲೂಕಿನ ಮತ್ತು ಆಸುಪಾಸಿನ ಹೈಸ್ಕೂಲ್‌ನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನವಂಬರ್ 24 ಹಾಗೂ 25ರಂದು ಕನಸುಗಳು ಕಾರ್ಯಕ್ರಮ ನಡೆಯಲಿದೆ. ಪ್ರಸ್ತುತ ವೇಗವಾಗಿ ಬೆಳೆಯುತ್ತಿರುವ ಈ ಜಗತ್ತನ್ನು ಎದುರಿಸಲು ಮುಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸಿದ್ಧಗೊಳಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ನವೆಂಬರ್ 24ರಂದು ನಡೆಯುವ ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಇವರು ವಹಿಸಲಿದ್ದು ಯುವ ಉದ್ಯಮಿ ಮತ್ತು ಪ್ರಾಚೀನ ಜನಪದ ವಸ್ತುಗಳ ಸಂಗ್ರಹಕಾರ ಸುಹಾಸ್ ಮರಿಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಸಚಿನ್ ಶೆಣೈ, ಸದಸ್ಯೆ ಇಂದಿರಾ ಬಿ ಕೆ ಉಪಸ್ಥಿತರಿರುತ್ತಾರೆ.

ಎರಡು ದಿವಸದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚರ್ಚಾ ಸ್ಪರ್ಧೆ, ಚಿತ್ರಕಲೆ, ಪ್ರಾಕೃತಿಕ ರಂಗೋಲಿ, ಕನ್ನಡ ಕವನ ರಚನೆ ಹಾಗೂ ವಾಚನ, ಯುವ ಪತ್ರಕರ್ತ, ದೃಶ್ಯ- ಕಾವ್ಯ, ಯುವ ಉದ್ಯಮಿ, ಯಕ್ಷಗಾನ ಭಾಗವತಿಕೆ, ಕಲರವ- ಸಾಂಸ್ಕೃತಿಕ ವೈವಿಧ್ಯ, ಮುಖವರ್ಣಿಕೆ, ವಿಡಿಯೋ ಸಂಕಲನ, ನಿಧಿ ಶೋಧ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ನವೆಂಬರ್ 25 ರಂದು ನಡೆಯಲಿರುವ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ. ಎಂ. ಕೃಷ್ಣ ಭಟ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಿಕ್ಷಕ- ರಕ್ಷಕ ಸಂಘದ ಜೊತೆ ಕಾರ್ಯದರ್ಶಿ ಪ್ರಸನ್ನ ಕುಮಾರ್ ಪುತ್ರಬೈಲು ಮತ್ತು ಉದಯೋನ್ಮುಕ ವಯಲಿನ್ ವಾದಕ ಶ್ರೀಜಿತ್ ಸರಳಾಯ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಮುರಳಿಕೃಷ್ಣ ರೈ ಮತ್ತು ಡಾ. ಕೃಷ್ಣಪ್ರಸನ್ನ ಕೆ ಉಪಸ್ಥಿತರಿರುತ್ತಾರೆ. ಸುಮಾರು 800 ವಿದ್ಯಾರ್ಥಿಗಳಿಗೆ ಈ ಶಿಬಿರದ ಸದುಪಯೋಗವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here