





ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.24ರಂದು ಬೆಳಿಗ್ಗೆ ತುಳಸಿ ಪೂಜೆ ನಡೆಯಿತು.ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ ಐತ್ತಪ್ಪ ನಾಯ್ಕ್, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ವೀಣಾ ಬಿ.ಕೆ, ಡಾ. ಸುಧಾ ಎಸ್ ರಾವ್, ರವೀಂದ್ರನಾಥ ರೈ ಬಳ್ಳಮಜಲು, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಮಾಜಿ ಪುರಸಭೆ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ರಾಧಾಕೃಷ್ಣ ನಂದಿಲ ಸಹಿತ ಹಲವಾರು ಮಂದಿ ಭಕ್ತರು ಉಪಸ್ಥಿತರಿದ್ದರು.











