ಪುತ್ತೂರು: ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣಕ್ಕೆ ಸಂಬಂಧಿಸಿ ಕಾರ್ಕಳದಿಂದ ಬೆಳ್ಳಾರೆಗೆ ಕೊಂಡೊಯ್ಯುತ್ತಿರುವ ಶಿಲಾಕಲ್ಲುಗಳಿಗೆ ನ.24ರಂದು ಬೆಳಿಗ್ಗೆ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತೆಂಗಿನ ಕಾಯಿ ಒಡೆದು ಶಿಲಾಕಲ್ಲುಗಳನ್ನು ಹೊತ್ತ ಲಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭ ಮಾಜಿ ಸಚಿವ ಎಸ್.ಅಂಗಾರ, ಹಿಂದು ಧಾರ್ಮಿಕ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗೌರಿಪುರಂ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಹೊಸವಳಿಗೆ, ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.