





ಪುತ್ತೂರು: ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿ ದೈವ, ದೇವರ ಪ್ರಸಾದ ಕಂಬಳ ಕರೆಯ ನೀರಿಗೆ ಅರ್ಪಣೆ ಮಾಡಿ ಯಾವುದೇ ಅಡ್ಡಿ ಆತಂಕ ಎದುರಾಗದಂತೆ ಪ್ರಾರ್ಥನೆ ಮಾಡಿದರು. ದೀಪ ಬೆಳಗಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕಂಬಳಕ್ಕೆ ಚಾಲನೆ ನೀಡಿದರು. ಗಂಗಾರತಿ ಮಾಡುವ ಮೂಲಕ ಕಂಬಳ ಕರೆಗೆ ಪೂಜೆ ಮಾಡಲಾಯಿತು. ದೀಪ ಬೆಳಗುವ ಮೂಲಕ ಬೆಂಗಳೂರು ಕಂಬಳದ ಜೋಡು ಕರೆಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉದ್ಘಾಟಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ಶಾಸಕ ಎಸ್.ಆರ್.ವಿಶ್ವನಾಥ್, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.


ಕಂಬಳದ ಪುನೀತ್ ರಾಜ್ ಕುಮಾರ್ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ
ಕಂಬಳದ ಪುನೀತ್ ರಾಜ್ ಕುಮಾರ್ ವೇದಿಕೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನವರು ಚಾಲನೆ ನೀಡಿದರು.









