ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮ ಪಂಚಾಯತ್ನ 2022-23ನೇ ಸಾಲಿನ ಜಮಾಬಂಧಿಯು ಸೆ.27ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂಧಿ ಅಧಿಕಾರಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.ಅವರು ಮಾತನಾಡಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರಕಾರದ ವಿವಿಧ ಅನುದಾನದಲ್ಲಿ ಆಗಿರುವ ಕಾಮಗಾರಿಗಳ ದಾಖಲೆ ಮತ್ತು ಗುಣಮಟ್ಟ ಪರಿಶೀಲನೆಗೆ ಜಮಾಬಂಧಿ ಸಭೆ ನಡೆಸಲಾಗುತ್ತಿದೆ. ಗ್ರಾಮಸ್ಥರು ಕಾಮಗಾರಿಯ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ತಿಳಿಸಬಹುದು ಎಂದು ಹೇಳಿದರು.
ಉದ್ಯೋಗ ಖಾತರಿ ಸೇರಿದಂತೆ ಸರಕಾರದ ವಿವಿಧ ಯೋಜನೆಗಳನ್ನು ಗ್ರಾಮಸ್ಥರು ಬಳಕೆ ಮಾಡಿಕೊಳ್ಳಬೇಕೆಂದು ಲೋಕೇಶ್ ಎಸ್.ಆರ್.ಹೇಳಿದರು. ಬಳಿಕ ಅವರು ಗ್ರಾಮ ಪಂಚಾಯತ್ನಲ್ಲಿ ನಡೆದ ವಿವಿಧ ಕಾಮಗಾರಿಗಳ ಲೆಕ್ಕಪತ್ರಗಳ ದಾಖಲೆ ಪರಿಶೀಲನೆ ನಡೆಸಿದರು. ಗ್ರಾ.ಪಂ.ಅಧ್ಯಕ್ಷೆ ಸವಿತಾ, ಪಿಡಿಒ ಜಗದೀಶ್ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಸದಸ್ಯರಾದ ವಾರಿಜಾಕ್ಷಿ, ಶೋಭಾಲತಾ, ವಿ.ಸಿ.ಜೋಸೆಫ್, ಜಾನಕಿ, ಬಾಲಕೃಷ್ಣ ಎ., ಜೀವಿತಾ ಪೆರಣ, ಗುಲಾಬಿ, ಶಿವಪ್ರಸಾದ್, ಪದ್ಮನಾಭ ಪೂಜಾರಿ ಹಾಗೂ ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಚಂದ್ರಾವತಿ ಎನ್. ಸ್ವಾಗತಿಸಿ, ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.