ಕಾಣಿಯೂರು ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ

0

ಕಾಣಿಯೂರು: ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ನಡೆಸಲಾಯಿತು. ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಪುಂಡಲಿಕ ಪೂಜಾರ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಜಯಂತಿರವರು ವಹಿಸಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯಗುರು ಉಷಾ ಕಿರಣ್ ರೈ, ದೈಹಿಕ ಶಿಕ್ಷಣ ಶಿಕ್ಷಕಿ ಲಕ್ಷ್ಮೀ ಕೆ. ಟಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕರಾದ ಸುಧಾಕರ್ ಎಸ್ ಸ್ವಾಗತಿಸಿ, ಶಶಿಕಲಾ ಕೆ. ವಂದಿಸಿದರು. ಸಂಧ್ಯಾ ಜೆ. ರೈ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂವಿಧಾನ ಪ್ರಸ್ತಾವನೆಯನ್ನು ವಾಚಿಸಲಾಯಿತು.

LEAVE A REPLY

Please enter your comment!
Please enter your name here