ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಅವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕಿ ಪುಷ್ಪ ಬಿ ಜೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸುತ್ತಾ ಸಂವಿಧಾನ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಾಲಾ ಮುಖ್ಯಗುರು ಸರಸ್ವತಿ ಎಂ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಜಯಂತ ಅಬೀರ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.