ಪುತ್ತೂರು: ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್, ಡೇ-ಎನ್.ಆರ್.ಎಲ್.ಎಂ. ಯೋಜನೆ ತಾಲೂಕು ಪಂಚಾಯತ್ ಪುತ್ತೂರು ಮತ್ತು ಕೊಳ್ತಿಗೆ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಅಣಬೆ ಬೇಸಾಯ ಕುರಿತು ತರಬೇತಿ ಕಾರ್ಯಕ್ರಮ ನ.27 ರಂದು ಕೊಳ್ತಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಅಕ್ಕಮ್ಮ ಸಭಾ ಅಧ್ಯಕ್ಷತೆ ವಹಿಸಿದ್ದರು.
ಪಂಚಾಯತ್ ಉಪಾಧ್ಯಕ್ಷ ಪ್ರಮೋದ್ ಕೆ.ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿ ಪಾಂಡುರಂಗರವರು ಅಣಬೆ ಬೇಸಾಯದ ಬಗ್ಗೆ ಮಾಹಿತಿ ನೀಡಿದರು. ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕಿ ರೇಖಾ, ಕೊಳ್ತಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುನೀಲ್ ಎಚ್.ಟಿ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಕೊಳ್ತಿಗೆ, ಕೆಯ್ಯೂರು, ಅರಿಯಡ್ಕ ಹಾಗೂ ಮುಂಡೂರು ಗ್ರಾಮದ ಸ್ವಸಹಾಯ ಸಂಘದ ಸದಸ್ಯರು ಹಾಗೂ ರೈತರು ಪಾಲ್ಗೊಂಡಿದ್ದರು. ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಳ್ತಿಗೆ ಇಲ್ಲಿನ ಎಂ.ಬಿ.ಕೆ, ಎಲ್.ಸಿ ಆರ್.ಪಿ ಹಾಗೂ ಕೃಷಿ ಸಖಿಯರು ಸಹಕರಿಸಿದರು.