ಪುತ್ತೂರು: ಬ್ರಹ್ಮಕಲಶೋತ್ಸವದ ಸಿದ್ದತೆಯಲ್ಲಿರುವ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಹಾಗೂ ನಳೀಲು ಬಸ್ ತಂಗುದಾಣ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಡಿ.1ರಂದು ನಡೆಯಲಿದೆ.
ಡಿ.1ರಂದು ಬೆಳಿಗ್ಗೆ 11ಕ್ಕೆ ಮಹಾದ್ವಾರ ನಿರ್ಮಾಣಕ್ಕೆ ಮಂಗಳೂರಿನ ಸಾಗರ್ ಇನ್‌ಸ್ಟ್ರಕ್ಷನ್ ನ ಗಿರಿಧರ್ ಶೆಟ್ಟಿ ಅವರು ಶಿಲಾನ್ಯಾಸ ನೆರವೇರಿಸುವರು.ನೂತನ ನಳೀಲು ಬಸ್ ತಂಗುದಾಣಕ್ಕೆ ಪುತ್ತೂರು ಶಾಸಕ ಹಾಗೂ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಅಶೋಕ್ ಕುಮಾರ್ ರೈ ಅವರು ಶಿಲಾನ್ಯಾಸ ನೆರವೇರಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಅಕ್ಕಮ್ಮ ಅವರು ವಹಿಸುವರು. ಅತಿಥಿಯಾಗಿ ಗ್ರಾ.ಪಂ.ಉಪಾಧ್ಯಕ್ಷ ಪ್ರಮೋದ್ ಕೆ.ಎಸ್ ಅವರು ಪಾಲ್ಗೊಳ್ಳುವರು.
ಮಧ್ಯಾಹ್ನ 12ಗಂಟೆಗೆ ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ನಡೆದು ಬಳಿಕ ಸಭಾ ಕಾರ್ಯಕ್ರಮದ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು ,ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ರೈ ನಳೀಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.