ಆಲಂಕಾರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಶ್ರೀ ರಾಮಕೃಷ್ಣ ಪ್ರೌಢ ಶಾಲೆ ಪುತ್ತೂರು ಇದರ ಆಶ್ರಯದಲ್ಲಿ ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯುವ 17ರ ವಯೋಮಾನದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಕ್ರೀಡಾಕೂಟದ ಅಂಗವಾಗಿ ಕ್ರೀಡಾ ಜ್ಯೋತಿಯು ಆಲಂಕಾರು ಪೇಟೆಯಿಂದ ಆಲಂಕಾರಿನ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನವರೆಗೆ ಮೆರವಣಿಗೆ ನಡೆದು ಕ್ರೀಡಾಜ್ಯೋತಿಯನ್ನು ಸ್ವಾಗತಿಸಲಾಯಿತು .
ಆಲಂಕಾರು ಪೇಟೆಯಲ್ಲಿ ಭವ್ಯವಾಗಿ ಸ್ವಾಗತಿಸಿ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜ್ ,ಆಲಂಕಾರು ಗ್ರಾ.ಪಂ,ಲಯನ್ಸ್ ಕ್ಲಬ್ ದುರ್ಗಾಂಬಾ ಆಲಂಕಾರು,ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಭಾರತಿ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರು ಮತ್ತು ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ,ಮಾರ್ ಇವಾನಿಯಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂತೂರು,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶರವೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಾಬೆ. ಇದರ ವಿದ್ಯಾರ್ಥಿ ಹಾಗು ವಿದ್ಯಾರ್ಥಿನಿಯರು ಹಾಗು ಅಧ್ಯಾಪಕ ವೃಂದದವರು ಕ್ರೀಡಾ ಜ್ಯೋತಿಯನ್ನು ಆಲಂಕಾರು ಪೇಟೆಯಿಂದ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ತನಕ ಮೆರವಣಿಗೆಯಲ್ಲಿ ಸಾಗಿ ಸ್ವಾಗತಿಸಿದರು.ನಂತರ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ದಯಾನಂದ ರೈ ಮನವಳಿಕೆಯವರು ಪುತ್ತೂರಿನಲ್ಲಿ ಪ್ರಪ್ರಥಮವಾಗಿ ರಾಜ್ಯಮಟ್ಟದ 17 ರ ವಯೋಮಾನದ ಪ್ರೌಡ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ ನಡೆಯುತ್ತಿರುವುದು ನಮಗೆಲ್ಲಾ ಬಹಳ ಹೆಮ್ಮೆಯ ವಿಷಯವಾಗಿದ್ದು ಎಲ್ಲರೂ ಭಾಗವಹಿಸಿ ಸಹಕರಿಸುವಂತೆ ವಿನಂತಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ದುರ್ಗಾಂಬಾ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಈಶ್ವರ ಗೌಡ ಪಜ್ಜಡ್ಕ, ಸದಸ್ಯರಾದ ದಯಾನಂದ ಗೌಡ ಆಲಡ್ಕ, ರಾಮರಾಜ ನಗ್ರಿ, ತಾರನಾಥ ರೈ ನಗ್ರಿ, ವಿಜಯ ಕುಮಾರ್ ರೈ ಮನವಳಿಕೆ. ಮುಖ್ಯಗುರುಗಳಾದ ಶ್ರೀಪತಿ ರಾವ್, ಪ್ರಾಂಶುಪಾಲರಾದ ನವೀನ್ ರೈ,ಆಲಂಕಾರು ಗ್ರಾ.ಪಂ ಅಧ್ಯಕ್ಷರಾದ ಸುಶೀಲ,ಅಭಿವೃದ್ಧಿ ಅಧಿಕಾರಿ ಸುಜಾತ,ಕಾರ್ಯದರ್ಶಿ ವಸಂತ ಶೆಟ್ಟಿ, ಉಪಾಧ್ಯಕ್ಷ ರವಿಪೂಜಾರಿ.ಕೆ ಶಿಕ್ಷಕರಾದ ಚಕ್ರಪಾಣಿ ಬಾಕಿಲ ಪ್ರದೀಪ್ ಬಾಕಿಲ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೀತಾರಾಮ ಗೌಡ ಮಿತ್ತಡ್ಕ, ದೈಹಿಕ ಶಿಕ್ಷಕರಾದ ನವೀನ್ ರೈ, ಸುಧೀರ್ ರೈ, ಸಂಘದ ಪದಾಧಿಕಾರಿಗಳು, ಸೈಂಟ್ ಜಾರ್ಜ್ ಪ್ರೌಢಶಾಲೆ ಕುಂತೂರು ಪದವು ಇದರ ಚಿತ್ರಕಲಾ ಶಿಕ್ಷಕರಾದ ಕಿಶೋರ್, ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು,ಕಡಬ ತಾಲೂಕಿನ ಮಾಜಿ ಅಧ್ಯಕ್ಷರಾದ ಸದಾಶಿವ ಶೆಟ್ಟಿ ಮಾರಂಗ, ಆಲಂಕಾರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಪ್ರಶಾಂತ ರೈ ಮನವಳಿಕೆ ಹಾಗು ಸದಸ್ಯರು,ಕೋಟಿ ಚೆನ್ನಯ ಮಿತ್ರವೃಂದದ ಅಧ್ಯಕ್ಷ ಜಯಂತ ಪೂಜಾರಿ ನೆಕ್ಕಿಲಾಡಿ. ಸ್ನೇಹ ಹೇರ್ ಡ್ರೆಸ್ ನ ಮಾಲಕರಾದ ಪದ್ಮನಾಭ ಭಂಡಾರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.ದೈಹಿಕ ಶಿಕ್ಷಕ ರಾಮಣ್ಣ ಗೌಡ ಅಗಮಿಸಿದ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ,ಅಧ್ಯಾಪಕ ವೃಂದದವರಿಗೆ ಸ್ವಾಗತಿಸಿ ,ವಂದಿಸಿದರು.