ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮದ ಕಾರ್ಯಾಲಯ ಉದ್ಘಾಟನೆ

0

ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಪ್ರಥಮ ಬಾರಿಗೆ ಡಿ.24 ಮತ್ತು 25 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ ಕಾರ್ಯಕ್ರಮಕ್ಕೆ ಕಾರ್ಯಾಲಯ ಮತ್ತು ಮಾಹಿತಿ ಕೇಂದ್ರವು ಡಿ.2ರಂದು ಬೆಳಿಗ್ಗೆ ಶ್ರೀ ದೇವಳದ ಬ್ರಹ್ಮರಥ ಮಂದಿರದ ಮುಂಭಾಗ ಉದ್ಘಾಟನೆಗೊಂಡಿತು.


ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಕಾರ್ಯಾಲಯ ಉದ್ಘಾಟಿಸಿದರು.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ ಮೂ ವಿ.ಎಸ್ ಭಟ್ ಪ್ರಾರ್ಥನೆ ನೆರವೇರಿಸಿದರು. ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷ ಉದ್ಯಮಿ ರವಿ ಶೆಟ್ಟಿ ನೇಸರ ಕಂಪ, ಉದ್ಯಮಿಗಳಾದ ಜಯಕುಮಾರ್ ನಾಯರ್, ಸ್ನೇಹ ಟೆಕ್ಸ್ ಟೈಲ್ಸ್ ನ ಸತೀಶ್, ಅಕ್ಷಯ ಗ್ರೂಪ್ ನ ಜಯಂತ ನಡುಬೈಲು, ಹರಿಪ್ರಸಾದ್ ಹೊಟೇಲ್ ನ ಹರಿನಾರಾಯಣ ಹೊಳ್ಳ, ಪುತ್ತಿಲ ಪರಿವಾರದ ಸ್ಥಾಪಕರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವದ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪದಾಧಿಕಾರಿಗಳು, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ,ಸ್ವಾಗತ ಸಮಿತಿ ಸಂಚಾಲಕರಾದ ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ರವಿ ರೈ ಕೆದಂಬಾಡಿ ಮಠ, ಆರ್ಯಾಪು ಗ್ರಾ ಪಂ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರದ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.

LEAVE A REPLY

Please enter your comment!
Please enter your name here