ರಾಮಕುಂಜೇಶ್ವರ ವಿದ್ಯಾಸಂಸ್ಥೆಯಲ್ಲಿ ’ರಾಮನ್ ಷಿಯಾ-2023’

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಮತ್ತು ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿ ಮ್ಯೂಸಿಯಂ ಬೆಂಗಳೂರು ಇವರ ಸಹಯೋಗದೊಂದಿಗೆ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯಲ್ಲಿ ರಾಮನ್ ಷಿಯಾ-2023 ಕಾರ್ಯಕ್ರಮ ಜರಗಿತು.
ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕರಾದ ರಾಮ್ ಭಟ್ ಅವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭನುಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನಿ ಹೇಮರಾಜ್, ವಿಐಟಿ ಮಿಷನ್ ಬೆಂಗಳೂರಿನ ಜಗದೀಶ್ ಹಾಗೂ ದಿಲೀಪ್ ಕುಮಾರ್ ಉಪಸ್ಥಿತರಿದ್ದರು. ಅತಿಥಿಗಳನ್ನು ಸಂಸ್ಥೆ ಪರವಾಗಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಗುರು ಸತೀಶ್ ಭಟ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಪ್ರಾಥಮಿಕ ಶಾಲೆಗಳ ಸುಮಾರು 300ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ಶಾಲಾ ಶಿಕ್ಷಕರಾದ ವಿಘ್ನೇಶ್ ವಂದಿಸಿದರು. ಶಾಲಾ ಹಿರಿಯ ಶಿಕ್ಷಕಿಯಾದ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದ್ದರು. ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ವಿಜ್ಞಾನ ಪಾರ್ಕ್, ವಿಜ್ಞಾನ ಪ್ರಯೋಗಾಲಯ, ರೋಬೋಟಿಕ್ಸ್, ಕ್ರೀಡಾ ವಿನೋದಗಳು, ಎನ್‌ಎಂಎಂಎಸ್ ಮತ್ತು ಒಲಿಂಪ್ಯಾಡ್ ಪರೀಕ್ಷೆಗೆ ಪೂರ್ವ ತಯಾರಿ ಸೇರಿದಂತೆ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿ ಮ್ಯೂಸಿಯಂ ವಿದ್ಯಾರ್ಥಿಗಳ ಗಮನ ಸೆಳೆದಿವೆ.

LEAVE A REPLY

Please enter your comment!
Please enter your name here