ಸ್ಥಳೀಯ ಸಂಸ್ಥೆ ಉಪಚುನಾವಣೆಗೆ ದಿನಾಂಕ ನಿಗದಿ-ಡಿ.27 ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

0

ಪುತ್ತೂರು: ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು ಪುತ್ತೂರು ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ಪುತ್ತೂರು ನಗರಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಸದಸ್ಯ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಡಿ.8ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30ರಂದು ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ನಗರಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8ರಿಂದ 30ರ ತನಕ ಜಾರಿಯಲ್ಲಿರಲಿದೆ.

LEAVE A REPLY

Please enter your comment!
Please enter your name here