![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿ ನಡೆದ ಶಾಂತಿವನ ಟ್ರಸ್ಟ್ ಧರ್ಮಸ್ಥಳದ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕಾಣಿಯೂರಿನ ಪ್ರಗತಿ ವಿದ್ಯಾ ಸಂಸ್ಥೆಯ ಧನುಷ್ ಕೆ( 5ನೇ ) ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಡಬ ತಾಲೂಕಿನ ಚಾರ್ವಕ ಗ್ರಾಮದ ಕಾಸ್ಪಾಡಿ ಸತ್ಯನಾರಾಯಣ ಕಲ್ಲುರಾಯ ಮತ್ತು ಕಲ್ಪನಾ ದಂಪತಿಗಳ ಪುತ್ರ. ಪ್ರೌಢಶಾಲಾ ವಿಭಾಗದ ಶ್ಲೋಕ ಕಂಠಪಾಠದಲ್ಲಿ ಈಶಿತ ಕೆ (10ನೇ) ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
![](https://puttur.suddinews.com/wp-content/uploads/2023/12/115e28a5-095d-4318-b4e7-d0d73ac7b6c4.jpg)
ಇವರಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಮತ್ತು ಎಲ್ಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಅಭಿನಂದಿಸಿದರು.
ಇವರಿಗೆ ಶಿಕ್ಷಕಿ ವಿನಯ ವಿ ಶೆಟ್ಟಿ ಮಾರ್ಗದರ್ಶನ ನೀಡಿದರು. ಜಯಶೀಲ ಕೆ ಸಹಕರಿಸಿದರು.