ಶಿಕ್ಷಣ ಫೌಂಡೇಶನ್ ಸಂಸ್ಥೆ ವತಿಯಿಂದ ಡಿಜಿಟಲ್ ಕೌಶಲ್ಯ ಕಾರ್ಯಕ್ರಮ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ತಾಲೂಕುಗಳಾದ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಮೂಡಬಿದ್ರೆ ತಾಲೂಕುಗಳ ಮಾಸಿಕ ಶೈಕ್ಷಣಿಕ ಪ್ರಗತಿ ಪರಿಶೀಲನ ಸಭೆ ಹಾಗೂ ಶಿಕ್ಷಣ ಫೌಂಡೇಶನ್ ವತಿಯಿಂದ ನೀಡಲಾಗುವ ಡಿಜಿಟಲ್ ಕೌಶಲ್ಯ ಅಭ್ಯಾಸ ಪುಸ್ತಕಗಳ ಅನಾವರಣ ಕಾರ್ಯಕ್ರಮವನ್ನು ಉಜಿರೆ ಎಸ್ ಡಿ ಎಂ ಸೆಕೆಂಡರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು ಅಭಿವೃದ್ಧಿಯ ರಾಜಲಕ್ಷ್ಮಿ ನೇತೃತ್ವದಲ್ಲಿ ನಡೆಸಲಾಯಿತು. ಶಿಕ್ಷಣ ಪೌಂಡೇಶನ್ ಸಂಸ್ಥೆಯ ಪ್ರೇರಣ ಕಾರ್ಯಕ್ರಮದ ಜಿಲ್ಲಾ ಸಂಯೋಜಕಿ ಸುಮತಿ ಪುತ್ತೂರು ರವರು ಡಿಜಿಟಲ್ ಕೌಶಲ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಯ 8ನೇ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಈ ಅಭ್ಯಾಸ ಪುಸ್ತಕಗಳ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲೆ ರಾಜಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ, ತಾರಾ ಕೇಸರಿ, ಜೇಮ್ಸ್ ಕುಟೀನೊ, ಈಶ್ವರ್, ವಿರೂಪಾಕ್ಷಪ್ಪ, ಡಯಟ್ ಹಿರಿಯ ಉಪನ್ಯಾಸಕ ಕುಟಿನೋ, ಸಹಾಯಕ ಯೋಜನಾ ಸಮನ್ವಯಾಧಿಕಾರಿ ಶೋಭಾ, ಕ್ಷೇತ್ರ ಸಮನ್ವಯಾಧಿಕಾರಿ ಉಸ್ಮಾನ್, ಶ್ರೀತಲ್, ರಾಘವೇಂದ್ರ ಬಲ್ಲಾಳ್, ಸೌಮ್ಯ, ಪ್ರಶಾಂತ್ ಕುಮಾರ್, ಮೋಹನ್ ಕುಮಾರ್ ಹಾಗೂ ಜಿಲ್ಲೆಯ ಬಿ.ಆರ್. ಪಿ., ಸಿ.ಆರ್.ಪಿ, ಬಿಐಆರ್‌ಟಿ, ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here