ಪುತ್ತೂರು: ಮಂಡ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿಶ್ವಮಾನವ ಪದವಿ ಪೂರ್ವ ಕಾಲೇಜು ಕೊಮ್ಮೇರಹಳ್ಳಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಂದ್ಯಾಶ್ರೀ ರೈ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇವರು ಶ್ರೀ ಮದ್ ಭಗವದ್ಗೀತಾ ಜಯಂತಿ ಪ್ರಯುಕ್ತ ನಡೆಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ಉಪ್ಪಿನಂಗಡಿ ಹೋಬಳಿ ಘಟಕ, ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ನೇತೃತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ, ಹಾಗೂ ದೇಶಭಕ್ತಿಗೀತೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರು ಕುರಿಯ ನಿವಾಸಿಯಾದ ಉಮೇಶ್ ರೈ ಮತ್ತು ಶೋಭಾವತಿ ಯು.ರೈ ದಂಪತಿಗಳ ಪುತ್ರಿ. ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಯನ್ನೂ ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ನಿರ್ದೇಶಕರಾದ ಸುಮನ ರಾವ್, ರಶ್ಮಿ ಪಿ ಎಸ್, ಹಾಗೂ ಭರತ್ ಜಿ.ಪೈ ಉಪಸ್ಥಿತರಿದ್ದರು.