ಅಧ್ಯಕ್ಷರಾಗಿ ಸುರೇಶ್ ಓಡಬಾಯಿ, ಉಪಾಧ್ಯಕ್ಷರಾಗಿ ಚಂದ್ರಯ್ಯ ಆಚಾರ್ಯ ಅಬೀರ
ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸಹಕಾರ ಭಾರತಿ ಬೆಂಬಲಿತ ಸುರೇಶ್ ಓಡಬಾಯಿ ಅಧ್ಯಕ್ಷರಾಗಿ, ಚಂದ್ರಯ್ಯ ಆಚಾರ್ಯ ಅಬೀರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಕಾಣಿಯೂರು ಸಂಘದ ಪ್ರಧಾನ ಕಚೇರಿಯಲ್ಲಿ ಡಿ.7ರಂದು ನಡೆಸಲಾಯಿತು.
ರಿಟರ್ನಿಂಗ್ ಅಧಿಕಾರಿ ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟಾಧಿಕಾರಿ ಶೋಭಾ ಎನ್.ಎಸ್ ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭದಲ್ಲಿ ನೂತನ ನಿರ್ದೇಶಕರುಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಂಘದ ನೂತನ ನಿರ್ದೇಶಕರಾದ ಮುರಳೀಧರ ಟಿ. ಪುಣ್ಚತ್ತಾರು, ಸುಂದರ ಬೆದ್ರಾಜೆ, ಚೆನ್ನಕೇಶವ ಗೌಡ ಬೇಂಗಡ್ಕ, ರಾಜೇಶ್ ಗೌಡ ಮೀಜೆ, ಸದಾನಂದ ಗೌಡ ನಾವೂರು, ರಾಜೇಶ್ ಗೌಡ ಮುಂಡಾಳ, ಭರತ್ ಅಗಳಿ, ಹೇಮಾವತಿ ಮುಗರಂಜ, ಸೌಮ್ಯ ಪೈಕ, ಗಿರಿಜ ಅಂಕಜಾಲು, ನೀಲಮ್ಮ ಬೇಂಗಡ್ಕ ಈ ಸಂದರ್ಭದಲ್ಲಿದ್ದರು. ಸಂಘದ ಕಾರ್ಯನಿರ್ವಹಣಾಽಕಾರಿ ಜಗದೀಶ್ ಗೌಡ ವಂದಿಸಿದರು.
ಸಿಬ್ಬಂದಿ ಚಂದ್ರಶೇಖರ ಬೈತಡ್ಕ ಸಹಕರಿಸಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು ಮಾತನಾಡಿ, ನನ್ನ ಅಧ್ಯಕ್ಷತೆ ಅವಧಿಯಲ್ಲಿ ಸಂಘದ ಅಭಿವೃದ್ಧಿಯಲ್ಲಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿ, ನೂತನ ಆಡಳಿತ ಮಂಡಳಿಗೆ ಶುಭಹಾರೈಸಿದರು. ನೂತನ ಅಧ್ಯಕ್ಷ ಸುರೇಶ್ ಓಡಬಾಯಿ ಮಾತನಾಡಿ, ಸಂಘದ ಅಭಿವೃದ್ಧಿಯಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು. ಕಾಣಿಯೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ನೂತನ ಆಡಳಿತ ಮಂಡಳಿಗೆ ಶುಭಹಾರೈಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ:
ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಪ್ರಮುಖರು ಶಾಲು, ಹಾರ ಹಾಕಿ ಅಭಿನಂದನೆ ಸಲ್ಲಿಸಿದರು. ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಸುಳ್ಯ ಮಂಡಲ ಸಮಿತಿ ಸಹಕಾರ ಪ್ರಕೋಷ್ಠದ ಸಹ ಸಂಚಾಲಕ ಧರ್ಮೇಂದ್ರ ಗೌಡ ಕಟ್ಟತ್ತಾರು, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿಕಟಪೂರ್ವ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಕಟಪೂರ್ವ ನಿರ್ದೇಶಕ ಪುಟ್ಟಣ್ಣ ಗೌಡ ಮುಗರಂಜ, ಕಾಣಿಯೂರು ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ಯಶವಂತ್ ಕೇಪುಳಗುಡ್ಡೆ, ಕಾಣಿಯೂರು ಸ.ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಅನಿಲ, ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ರಾಧಾಕೃಷ್ಣ ಮುದುವ ಮತ್ತೀತರರು ಉಪಸ್ಥಿತರಿದ್ದರು.