ಕೆದಂಬಾಡಿ ಗ್ರಾಪಂ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ 2022-23 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮತ್ತು 14 ನೇ ಹಣಕಾಸು ಹಾಗೂ 15 ನೇ ಹಣಕಾಸು ಯೋಜನೆಯ 2022-23 ನೇ ಸಾಲಿನ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಡಿ.8 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಉಪ್ಪಿನಂಗಡಿ ವಲಯದ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆರವರು ಸಭಾಧ್ಯಕ್ಷತೆ ವಹಿಸಿ ಸಭೆ ನಡೆಸಿಕೊಟ್ಟರು. ನರೇಗಾದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಪ್ರವೀಣ್‌ರವರು ನರೇಗಾದ ಬಗ್ಗೆ ಮಾಹಿತಿ ನೀಡುತ್ತಾ, ಪ್ರತಿಯೊಬ್ಬರು ತಮ್ಮ ಜಮೀನಿನಲ್ಲಿ ನರೇಗಾದ ಮೂಲಕ ವಿವಿಧ ಕಾಮಗಾರಿಗಳನ್ನು ನಡೆಸಿ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ನರೇಗಾದ ಐಇಸಿ ಸಂಯೋಜಕ ಭರತ್‌ರಾಜ್‌ರವರು, ನರೇಗಾದ ಬಗ್ಗೆ ಮಾಹಿತಿ ನೀಡಿದರು.


ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ, ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್, ನಿಕಟಪೂರ್ವ ಅಧ್ಯಕ್ಷ ರತನ್ ರೈ ಕುಂಬ್ರ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಸ್ವಾಗತಿಸಿ, ವಂದಿಸಿದರು. ಗ್ರೇಡ್1 ಕಾರ್ಯದರ್ಶಿ ಸುನಂದ ಬಿ.ರೈ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳಾದ ಜಯಂತ ಮೇರ್ಲ, ಗಣೇಶ್, ವಿದ್ಯಾಪ್ರಸಾದ್, ಮೃದುಳಾ, ಶಶಿಪ್ರಭಾ ರೈ ಸಹಕರಿಸಿದ್ದರು.


151 ಕಾಮಗಾರಿಗಳು
ಕೆದಂಬಾಡಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದ ಮೂಲಕ ೧೫೧ ಕಾಮಗಾರಿಗಳು ನಡೆದಿದ್ದು 23ಲಕ್ಷದ 48ಸಾವಿರದ241 ರೂಪಾಯಿ ಕೂಲಿ ಮೊತ್ತ ಪಾವತಿಸಲಾಗಿದ್ದು, 6ಲಕ್ಷದ28ಸಾವಿರದ416 ರೂಪಾಯಿ ಸಾಮಾಗ್ರಿ ವೆಚ್ಚ ಪಾವತಿಸಲಾಗಿದೆ. ಒಟ್ಟು 30 ಲಕ್ಷದ26ಸಾವಿರದ657 ರೂಪಾಯಿಯ ಕಾಮಗಾರಿ ನಡೆದಿದೆ.

LEAVE A REPLY

Please enter your comment!
Please enter your name here