ಪುತ್ತೂರು:ಬನ್ನೂರು ಗ್ರಾ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಮಾದರಿ ಗ್ರಾಮ ವಿಕಾಸ ಕೇಂದ್ರ, ಅಂಗನವಾಡಿ ಕೇಂದ್ರ, ಬಾಲ ವಿಕಾಸ ಸಮಿತಿ, ಸ್ವ-ಸಹಾಯ ಸಂಘಗಳ ಒಕ್ಕೂಟ, ಹಿರಿಯ ವಿದ್ಯಾರ್ಥಿಗಳು, ನವಸಾಕ್ಷರರು ಬೀರಿಗ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಷರೋತ್ಸವ ಹಾಗೂ ಬಾಲಮೇಳವು ಬೀರಿಗ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಸ್ನೇಹ ಸಿಲ್ಕ್ ಜವುಳಿ ಮಳಿಗೆ ಮ್ಹಾಲಕ ಸತೀಶ್ ಮಾತನಾಡಿ, ಅಂಗನವಾಡಿ ಕೇಂದ್ರ ಹಾಗೂ ಮಾದರಿ ಗ್ರಾಮ ವಿಕಾಸ ಕೇಂದ್ರ ಕಾರ್ಯಗಳನ್ನು ಶ್ಲಾಘಿಸಿದ ಅವರು ಅಂಗನವಾಡಿ ಕೇಂದ್ರಕ್ಕೆ ಸ್ಮಾರ್ಟ್‌ಕ್ಲಾಸ್ ಪ್ರಾರಂಭಿಸಲು ದೇಣಿಗೆ ನೀಡುವ ಭರವಸೆ ನೀಡಿದರು.
ಜಿಲ್ಲಾ ಸ್ವಚ್ಚತಾ ರಾಯಭಾರಿ ಶೀನ ಶೆಟ್ಟಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಚಂದ್ರಶೇಖರ ಪಾತೂರ್, ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ ಸಾಕ್ಷರತೆ, ಸ್ವಚ್ಚತೆ ಹಾಗೂ ಮಾದರಿ ಗ್ರಾಮ ವಿಕಾಸದ ಬಗ್ಗೆ ಸಂವಾದ ನಡೆಸಿದರು.
ಕಾರ್ಯಕ್ರಮವನ್ನು ಅಂಗನವಾಡಿ ಪುಟಾಣಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಬನ್ನೂರು ಗ್ರಾ.ಪಂ ಅಧ್ಯಕ್ಷೆ ಸ್ಮಿತಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಶೀನಪ್ಪ ಕುಲಾಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಜೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರದ ಸಾಧಕರನ್ನು ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಬನ್ನೂರು ಗ್ರಾ.ಪಂ ಸದಸ್ಯರಾದ ಜಯ, ಸುಪ್ರಿತಾ ಪ್ರಭು, ತಿಮ್ಮಪ್ಪ ಪೂಜಾರಿ, ರಾಘವೇಂದ್ರ, ವಿಮಲ, ಕೋಡಿಂಬಾಡಿ ಗ್ರಾ.ಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ರಾಮಚಂದ್ರ ಪೂಜಾರಿ ಸೇರಿದಂತೆ ಹಲವು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹಿರಿಯ ವಿದ್ಯಾರ್ಥಿಗಳು, ಸ್ವ-ಸಹಾಯ ಸಂಘದ ಸದಸ್ಯರು, ನವ ಸಾಕ್ಷರರು, ಮಕ್ಕಳ ಪೋಷಕರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಬಾಲ ವಿಕಾಸ ಸಮಿತಿ ಅಧ್ಯಕ್ಷ ಸ್ವಾತಿ ಗಣೇಶ್ ಸ್ವಾಗತಿಸಿ, ಸಂಧ್ಯಾ ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ಅರುಣಾ ಡಿ. ಕಾರ್ಯಕ್ರಮ ನಿರೂಪಿಸಿದರು.