ಕುಕ್ಕೆ ಶ್ರೀಸುಬ್ರಹ್ಮಣ್ಯ ಕ್ಷೇತ್ರದ ಪವಿತ್ರ ಮಹಾ ಪ್ರಸಾದ ಮೂಲಮೃತ್ತಿಕೆ ವಿತರಣೆ

0

ಸುಬ್ರಹ್ಮಣ್ಯ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪವಿತ್ರ ಮಹಾ ಪ್ರಸಾದ ಮೂಲಮೃತ್ತಿಕೆಯನ್ನು (ಹುತ್ತದ ಮಣ್ಣು) ಶನಿವಾರ ತೆಗೆಯಲಾಯಿತು.ದೇಗುಲದ ಪ್ರಧಾನ ಅರ್ಚಕರು ಶನಿವಾರ ಬೆಳಗ್ಗೆ ಗರ್ಭಗುಡಿಯಿಂದ ಮೂಲಮೃತ್ತಿಕೆಯನ್ನು ತೆಗೆದು ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಿಸಿದರು. ಮೂಲಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಗರ್ಭಗುಡಿಯಿಂದ ತೆಗೆಯುವ ಈ ಮೃತ್ತಿಕೆ ಅತ್ಯಂತ ಪವಿತ್ರ ಮಹಾಪ್ರಸಾದ ಎಂಬ ನಂಬಿಕೆ ಕ್ಷೇತ್ರದ ಭಕ್ತರದು.

ಒಂದು ಬಾರಿ ಮಾತ್ರ
ಮೂಲಮೃತ್ತಿಕೆಯನ್ನು ವರ್ಷದಲ್ಲಿ ಒಮ್ಮೆ ಮಾತ್ರ ತೆಗೆಯಲಾಗುತ್ತದೆ. ಈ ಪ್ರಸಾದವು ರೋಗ ನಿರೋಧಕ, ಸಂತಾನ ಕಾರಕ ಮತ್ತು ಚರ್ಮ ರೋಗಗಳ ಪರಿಹಾರಕ್ಕೆ ದಿವ್ಯ ಔಷಧ‌ವೆಂಬ ನಂಬಿಕೆಯಿದೆ.

ಮೃತ್ತಿಕಾ ಪ್ರಸಾದವನ್ನು ಶುಭ ಕಾರ್ಯಗಳ ಒಳಿತಿಗೂ ವ್ಯಾಧಿಗಳ ನಿವಾರಣೆಗೂ ಭಕ್ತರು ಕೊಂಡೊಯ್ಯುತ್ತಾರೆ. ಇದನ್ನು ತೀರ್ಥದಲ್ಲಿ ಸೇವಿಸುವ ಮೂಲಕ ಅಥವಾ ಶರೀರಕ್ಕೆ ರಕ್ಷೆಯಾಗಿ ಕಟ್ಟಿಕೊಳ್ಳುವ ಮೂಲಕ ಭಕ್ತರು ತಮ್ಮೊಳಗೆ ಧಾರಣೆ ಮಾಡುತ್ತಾರೆ. ಮೂಲಮೃತ್ತಿಕೆ ತೆಗೆಯುವ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಭಕ್ತರಿಗೆ ವಿಳಂಬವಾಗಿ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.

LEAVE A REPLY

Please enter your comment!
Please enter your name here