ರಾಮಕುಂಜ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಷಷ್ಠ್ಯಬ್ದ ಪ್ರಯುಕ್ತ ಗುರುವಂದನೆ, ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ವಾರ್ಷಿಕೋತ್ಸವ ಡಿ.16 ಹಾಗೂ 17ರಂದು ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಡಿ.16ರಂದು ಬೆಳಿಗ್ಗೆ 9.30ರಿಂದ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದ್ದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚನ ಮಾಡಲಿದ್ದಾರೆ. ಅತಿಥಿಗಳಾಗಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ, ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾಗಿರುವ ಕಡಬ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ, ಉಡುಪಿ ಗನಿ ಡೆವಲಪರ್ಸ್ ಸಂಸ್ಥೆ ಮಾಲಕ ಅಶೋಕ್ ಕುಮಾರ್ ಶೆಟ್ಟಿ, ಪುತ್ತೂರು ಪಡೀಲ್‌ನಲ್ಲಿರುವ ಶ್ರೀ ದುರ್ಗಾ ಕ್ಲಿನಿಕ್‌ನ ವೈದ್ಯ ಡಾ.ಶೈಲೇಶ್ ಬಿ.ಎಸ್., ಸಿವಿಲ್ ಇಂಜಿನಿಯರ್ ಆಲಂಕಾರು ಆಕಾರ್ ಎಸೋಸಿಯೇಟ್ಸ್‌ನ ಲಕ್ಷ್ಮೀ ನಾರಾಯಣ ಅಲೆಪ್ಪಾಡಿ ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಿಗ್ಗೆ ಗಂಟೆ 11.30ರಿಂದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಮತ್ತು ಶನೀಶ್ವರ ಮಹಾತ್ಮೆ ಯಕ್ಷಗಾನ ನಡೆಯಲಿದೆ. ಸಂಜೆ 4ರಿಂದ ಹಿರಿಯ ವಿದ್ಯಾರ್ಥಿ ಸಂಘದ ಪ್ರಾಯೋಜಕತ್ವದಲ್ಲಿ ಶಾರದಾ ಆರ್ಟ್ಸ್ ತಂಡದ ಐಸಿಸಿ ಕಲಾವಿದೆರ್ ಮಂಜೇಶ್ವರ ಅಭಿನಯಿಸುವ ’ ಮಲ್ಲ ಸಂಗತಿಯೇ ಅತ್ತ್’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.
ಡಿ.17: ಗುರುವಂದನೆ:
ಡಿ.17ರಂದು ಬೆಳಿಗ್ಗೆ 9.30ರಿಂದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಗುರುವಂದನೆ ನಡೆಯಲಿದೆ. ಧಾರ್ಮಿಕ ವಿಧ್ವಾಂಸರಾದ ವೇದಮೂರ್ತಿ ಶ್ರೀವತ್ಸ ಕೆದಿಲಾಯ ಶಿಬರ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಭೌತಶಾಸ್ತ್ರ ಉಪನ್ಯಾಸಕ ನರಸಿಂಹ ಭಟ್, ಹಿರಿಯ ವಿದ್ಯಾರ್ಥಿಗಳಾಗಿರುವ ಬೆಂಗಳೂರಿನ ಐಟಿ ಕನ್ಸಲ್ಟೆಂಟ್ ಪ್ರಿನ್ಸಿಪಾಲ್ ರಾಘವೇಂದ್ರ ಉಳಿತ್ತಾಯ, ಪುತ್ತೂರು ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಹೆಚ್‌ಒಡಿ ಕೃಷ್ಣ ಕಾರಂತ್, ನ್ಯಾಯವಾದಿ ನಾಗೇಶ್ ಶರ್ಮ, ಬೆಂಗಳೂರಿನ ಎಎಂಎ ಸೆರಾಮಿಕ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಅಬ್ದು ಸಮದ್ ಕುಂತೂರು, ಕಡಬ ಜಾನ್‌ಸನ್ ಗ್ಲಾಸಸ್ ಮತ್ತು ಪ್ಲೈವುಡ್ಸ್ ಮಾಲಕ, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷರೂ ಆದ ತೋಮಸ್ ಕೆ.ಎಸ್., ಪ್ರಗತಿಪರ ಕೃಷಿಕ ಕೃಷ್ಣ ಕೆದಿಲಾಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಿವೃತ್ತ ಉಪನ್ಯಾಸಕ ಹರಿನಾರಾಯಣ ಆಚಾರ್ಯ, ಪ್ರೌಢಶಾಲಾ ವಿಭಾಗದ ನಿವೃತ್ತ ಶಿಕ್ಷಕ ಬಾಲಚಂದ್ರ ಮುಚ್ಚಿಂತಾಯ, ಸಂಸ್ಕೃತ ಪಾಠ ಶಾಲೆಯ ನಿವೃತ್ತ ಮುಖ್ಯಗುರು ಜನಾರ್ದನ ಕೆ.ಜಿ., ಕಬಡ್ಡಿ ತರಬೇತುದಾರರಾದ ಮಾಧವ ಬಿ.ಕೆ., ಜಶ್ವಂತ್ ಗೌಡ ಅವರಿಗೆ ಸನ್ಮಾನ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.