ಡಿ.24ಕ್ಕೆ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮ – ಪೂರ್ವಭಾವಿ ಸಭೆ – ಅದೃಷ್ಟ ಐದು ಮಂದಿ ಮಹಿಳೆಯರಿಗೆ ಪ್ರಸಾದ ರೂಪದಲ್ಲಿ ಸೀರೆ ವಿತರಣೆ

0

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಡಿ.24ರಂದು ನಡೆಯುವ ವಾರ್ಷಿಕ ಕಾರ್ಯಕ್ರಮ ಶ್ರೀ ಸತ್ಯನಾರಾಯಣ ಪೂಜೆ, ನೂತನ‌ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮದ ಪೂರ್ವ ಸಿದ್ದಾಂತ ಸಭೆಯು ಡಿ.13ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು.
ಸಂಘದ ಸಲಹಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮದ ಯಶಸ್ಸಿಗೆ ಮನವಿ ಮಾಡಿದರು. ಈ ಸಂದರ್ಭ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಸಲಹಾ ಸಮಿತಿ ಉಪಾಧ್ಯಕ್ಷ ಚಿದಾನಂದ ಬೈಲಾಡಿ, ನಿಯೋಜಿತ ಅಧ್ಯಕ್ಷ ರವಿ ಮುಂಗ್ಲಿಮನೆ, ನಿಯೋಜಿತ ದಯಾನಂದ ಕೆ ಎಸ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here