ಸಮಾಜಕ್ಕೆ ಉತ್ತಮ ಸಂದೇಶ ನೀಡುವ: ಡಾ.ಎಂ. ಮೋಹನ ಆಳ್ವ
ಮಂಗಳೂರು: ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು ವಿರಾಸತ್ ಹೊಂದಿದೆ. ಸತ್ಯವನ್ನೇ ಬರೆಯುವ ಧ್ಯೇಯವನ್ನು ಮಾಧ್ಯಮ ಹೊಂದಿದೆ. ಜೊತೆಯಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.
ಡಿ.14ರಿಂದ 17ರ ವರೆಗೆ ನಡೆಯುವ ’ಆಳ್ವಾಸ್ ವಿರಾಸತ್ -೨೩’ರ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವನ್ಯಜೀವ ಛಾಯಾಗ್ರಾಹಕರಾದ ನಿವೃತ್ತ ಐಎ-ಎಸ್ ಅಽಕಾರಿ ಎಂ.ಎನ್. ಜಯಕುಮಾರ್ ಮಾತನಾಡಿ, ಮಾಧ್ಯಮಗಳ ಮೂಲಕ ಜನರಿಗೆ ಒಳ್ಳೆ ಸಂದೇಶ ತಲುಪಲಿ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾತನಾಡಿ, ಸಂಸ್ಕೃತಿಯನ್ನು ದೇಶ ಮಾತ್ರವಲ್ಲದೆ ಹೊರ ದೇಶದ ವರೆಗೂ ತಲುಪಿಸುವ ಕಾರ್ಯ ನಡೆಯುತ್ತಿದೆ. ಪತ್ರಕರ್ತರು ಕೇವಲ ವರದಿ ಮಾತ್ರವಲ್ಲದೆ, ಈ ವಿರಾಸತ್ ಉತ್ಸವವನ್ನು ಆಸ್ವಾದಿಸಬೇಕು ಎಂದರು.
ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಖಜಾಂಚಿ ಪುಷ್ಪರಾಜ್ ಬಿ.ಎನ್., ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ಮೂಡುಬಿದಿರೆ ತಾಲ್ಲೂಕು ಘಟಕದ ಅಧ್ಯಕ್ಷ ಯಶೋಧರ, ಕಾರ್ಯದರ್ಶಿ ಪ್ರೇಮಾಶ್ರೀ ಕಲ್ಲಬೆಟ್ಟು, ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಇದ್ದರು. ವಿದ್ಯಾರ್ಥಿ ಅವಿನಾಶ್ ಕಟೀಲ್ ನಿರೂಪಿಸಿದರು.