ಡಿ.16: ಯುವವಾಹಿನಿ ಪುತ್ತೂರು ಘಟಕದ ಪದಪ್ರದಾನ

0

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಡಿ.16 ರಂದು ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಲಿದೆ.

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಉಮೇಶ್ ಬಾಯಾರು ಅಧ್ಯಕ್ಷತೆ ವಹಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ರಾಜೇಶ್ ಬಿ. ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಕರ್ನಾಟಕ ಬ್ಯಾಂಕ್ ಅಧಿಕಾರಿ ಹರೀಶ್ ಪೂಜಾರಿ ಉದ್ಯಂಗಳ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಸನಿಲ್ ಭಾಗವಹಿಸಲಿದ್ದಾರೆ ಎಂದು ಯುವವಾಹಿನಿ ಪುತ್ತೂರು ಘಟಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here