ಪುತ್ತೂರು: ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಒಳಮೊಗ್ರು ಗ್ರಾಮ ಪಂಚಾಯತ್‌ನ 2022-23ನೇ ಸಾಲಿನ ದ್ವಿತೀಯ ಹಾಗೂ 2023-24ನೇ ಸಾಲಿನ ಪ್ರಥಮ ಹಂತದ ಮತ್ತು 2022-23ನೇ ಸಾಲಿನ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ದ.15ರಂದು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಧರ್ಮಪಾಲರವರು ಸಭಾಧ್ಯಕ್ಷತೆ ವಹಿಸಿ ಸಭೆ ನಡೆಸಿಕೊಟ್ಟರು. ನರೇಗಾದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಪ್ರವೀಣ್‌ರವರು, ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಖಾತರಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ನರೇಗಾದ ಐಇಸಿ ಸಂಯೋಜಕ ಭರತ್‌ರಾಜ್‌ರವರು, ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.
ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರು ಗ್ರಾಮಸ್ಥರು ಹೆಚ್ಚಿನ ಪ್ರಮಾಣದಲ್ಲಿ ನರೇಗಾದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ತೋಟಗಾರಿಕೆಯ ತಾಂತ್ರಿಕ ಇಂಜಿನಿಯರ್ ಆಂಕಾಕ್ಷ, ಗ್ರಾಪಂ ಪ್ರಭಾರ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಜಯಂತಿ ಸ್ವಾಗತಿಸಿ,ವಂದಿಸಿದರು. ನರೇಗಾದ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ರಮೇಶ್ ಪೂಜಾರಿ, ಚಂಚಲ, ದೀಪಿಕಾ, ಶ್ರೀವಿದ್ಯಾ, ರೋಹಿಣಿ ಮತ್ತು ರಶ್ಮಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಗ್ರಾಪಂ ಸಿಬ್ಬಂದಿಗಳಾದ ಜಾನಕಿ, ಗುಲಾಬಿ, ಕೇಶವ, ಮೋಹನ್ ಸಹಕರಿಸಿದ್ದರು. ಸಭೆಯಲ್ಲಿ ಗ್ರಾಪಂ ಸದಸ್ಯರುಗಳು, ನರೇಗಾ ಫಲಾನುಭವಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.
137 ಕಾಮಗಾರಿ 9611 ಮಾನವ ದಿನ
ಒಳಮೊಗ್ರು ಗ್ರಾಪಂನಲ್ಲಿ 2022-23 ಸಾಲಿನಲ್ಲಿ ನರೇಗಾದ ಮೂಲಕ ಒಟ್ಟು 137 ಕಾಮಗಾರಿ ಆಗಿದ್ದು 9611 ಮಾನವ ದಿನಗಳ ಕೆಲಸ ನಡೆದಿದೆ. ಕೂಲಿ ವೆಚ್ಚವಾಗಿ 29,74,109 ರೂ.ಪಾವತಿಯಾಗಿದ್ದು ಸಾಮಾಗ್ರಿ ವೆಚ್ಚ ರೂ.30,92,362 ಒಟ್ಟು ರೂ.60,66,471 ರೂಪಾಯಿ ಪಾವತಿಯಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.