ಪುತ್ತೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪುತ್ತೂರು ಶಿಶು ಅಭಿವೃದ್ಧಿ ಯೋಜನೆ,ಬನ್ನೂರು ಗ್ರಾಮ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಬಾಲಮೇಳ ಕಾರ್ಯಕ್ರಮ 2023 ಡಿ.17ರಂದು ಬೇರಿಕೆ ಅಂಗನವಾಡಿ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ.
ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಬನ್ನೂರು ಗ್ರಾಮ ಪಂ ಉಪಾಧ್ಯಕ್ಷ ಶೀನಪ್ಪ ಕುಲಾಲ್, ಸದಸ್ಯರಾದ ಸುಪ್ರೀತಾ ರತ್ನಾಕರ ಪ್ರಭು, ಹರಿಣಾಕ್ಷಿ ಡೀಕಯ್ಯ ಪೂಜಾರಿ,ಇತರ ಸದಸ್ಯರು,ಪುತ್ತೂರು ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀಲತಾ, ಬನ್ನೂರು ಗ್ರಾ.ಪಂ ಪಿಡಿಒ ಚಿತ್ರಾವತಿ, ಮಾಜಿ ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ.
ಸನ್ಮಾನ: ಪುತ್ತೂರು ನಿವೃತ್ತ ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿಯಾಗಿದ್ದ ಭಾರತಿ ಜೆ.ಎ ರಿಗೆ ಸನ್ಮಾನ ನಡೆಯಲಿದೆ. ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.