ಡಿ.17ರಂದು ಕಾವುನಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ

0

ಕಾವು: ಪುತ್ತಿಲ ಪರಿವಾರ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕಾವು ಮಾಡ್ನೂರು ಇದರ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವು ಡಿ.17ರಂದು ಕಾವು ನನ್ಯ ಜನಮಂಗಲ ಸಭಾಭವನದಲ್ಲಿ ನಡೆಯಲಿದೆ.

ಮಧ್ಯಾಹ್ನ ಗಂಟೆ 2.30ಕ್ಕೆ ಆರಂಭವಾಗಲಿರುವ ವಿವಿಧ ತಂಡಗಳ ಭಜನಾ ಕಾರ್ಯಕ್ರಮವನ್ನು ಪಳನೀರು ಓಂ ಶ್ರೀ ಭಜನಾ ಸಂಘದ ಅಧ್ಯಕ್ಷ ಅಮ್ಮು ಪೂಂಜಾರವರು ಉದ್ಘಾಟಿಸಲಿದ್ದಾರೆ. ಸಂಜೆ ಗಂಟೆ 4.30ರಿಂದ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆದು ಸಂಜೆ ಗಂಟೆ 6 ಕ್ಕೆ ಮಹಾಪೂಜೆ, ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

ಸಂಜೆ ಗಂಟೆ 6.30ಕ್ಕೆ ಮಹಾಲಿಂಗೇಶ್ವರ ಭಟ್ ಪಳನೀರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿದ್ದಾರೆ. ಶ್ರೀಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಕಾವು ನನ್ಯ ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ ಮದ್ಲ ಮತ್ತು ಕೆರೆಮಾರು ಶ್ರೀ ಅಯ್ಯಪ್ಪ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಸುಂದರ ಪೂಜಾರಿ ಕೆರೆಮಾರುರವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ನಾಟಿ ವೈದ್ಯ ಶ್ಯಾಮ್ ಭಟ್ ಬಟ್ಯಡ್ಕ, ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ ಮಳಿ, ನಾಗಸ್ವರ ವಾದಕ ಶ್ರೀಧರ ಪೂವಂದೂರುರವರಿಗೆ ಗೌರವಾರ್ಪಣೆ ನಡೆಯಲಿದೆ. ರಾತ್ರಿ ಗಂಟೆ 8.30ರಿಂದ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಹರೀಶ್ ಕುಂಜತ್ತಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here