ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಮತ್ತು ಪ್ರಸಾದ್ ನೇತ್ರಾಲಯ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಭಾರತ ಸರ್ಕಾರ (NOTTO) ಇದರ ಸಂಯೋಗದೊಂದಿಗೆ ಅಂಗಾಂಗ ದಾನ ನೋಂದಾಣಿಕೆ ಮಾಹಿತಿ ಶಿಬಿರ ಡಿ.19 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ರಾಧಾಕೃಷ್ಣ ಬಿಲ್ಡಿಂಗ್ ನಲ್ಲಿನ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಮತ್ತು ಪ್ರಸಾದ್ ನೇತ್ರಾಲಯದಲ್ಲಿ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮತ್ತು ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ತರಬೇಕಾಗಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಜೈರಾಜ್ ಭಂಡಾರಿ, ಕಾರ್ಯದರ್ಶಿ ಸುಜಿತ್ ಡಿ.ರೈ, ಸಮುದಾಯ ಸೇವಾ ನಿರ್ದೇಶಕ ಸೋಮಶೇಖರ್ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.