ರಾಮಕುಂಜ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

0

ರಾಮಕುಂಜ: ರಾಮಕುಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಮಕುಂಜ ಅಂಗನವಾಡಿ ಕೇಂದ್ರದಲ್ಲಿ ಡಿ.15ರಂದು ಬಾಲಮೇಳ ನಡೆಯಿತು.ರಾಮಕುಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಲಿತಾ ಉದ್ಘಾಟಿಸಿದರು. ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರೇಮಾ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ರಾಮಕುಂಜ ಗ್ರಾ.ಪಂ.ಉಪಾಧ್ಯಕ್ಷ ಕೇಶವ್ ಗಾಂಧಿಪೇಟೆ, ಸದಸ್ಯ ಸೂರಪ್ಪ ಕುಲಾಲ್, ಬಾಲವಿಕಾಸ ಸಮಿತಿಯ ಸದಸ್ಯರಾದ ಫಾರೂಕ್ ಅಮೈ, ಕರೀಮ್ ಹೇಂತಾರು, ರಾಮಕುಂಜ ಸರಕಾರಿ ಹಿ.ಪ್ರಾ.ಶಾಲಾ ಶಿಕ್ಷಕಿ ಗುಲಾಬಿ ಭಾಗವಹಿಸಿದ್ದರು. ಆಶಾ ಕಾರ್ಯಕರ್ತೆ ಶ್ರೀಮತಿ ಪ್ರಮೀಳಾರವರು ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.


ಅಂಗನವಾಡಿ ಕಾರ್ಯಕರ್ತೆ ಯಮುನಾ ಸ್ವಾಗತಿಸಿ, ಸಹಾಯಕಿ ಪ್ರವೀಣ ಸಹಕರಿಸಿದರು. ಅಂಗನವಾಡಿ ಮಕ್ಕಳು ಪ್ರಾರ್ಥಿಸಿದರು. ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಬಹುಮಾನ ಪ್ರಾಯೋಜಕತ್ವವನ್ನು ಫಾರೂಕ್ ಅಮೈ ಹಾಗೂ ಉಪಹಾರ ವ್ಯವಸ್ಥೆಯನ್ನು ಸಮಿತಿ ಸದಸ್ಯರು ಮಾಡಿ ಸಹಕರಿಸಿದರು.

LEAVE A REPLY

Please enter your comment!
Please enter your name here