ಡಿ.22: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ನಾಗದೇವರ ಪುನಃಪ್ರತಿಷ್ಠೆ

0

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೀಕರಣಗೊಂಡಿರುವ ಶ್ರೀ ನಾಗದೇವರ ಕಟ್ಟೆಯಲ್ಲಿ ಶ್ರೀ ನಾಗದೇವರ ಪುನಃಪ್ರತಿಷ್ಠೆಯು ಡಿ.22ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ, ಕಲಶ ಪೂಜೆ, ಬಳಿಕ ಶ್ರೀ ನಾಗದೇವರ ಪುನಃ ಪ್ರತಿಷ್ಠೆ, ಆಶ್ಲೇಷಾ ಬಲಿ, ವಟು ಆರಾಧನೆ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ತಂಬಿಲಸೇವೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here