ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್-ಡಿ.27 ರಿಂದ 29ರವರೆಗೆ ನಡೆಯುವ ಕ್ಯಾಂಪ್‌ ನಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಶಾಸಕ ರೈ ಮನವಿ

0

ಪುತ್ತೂರು: ಗೃಹಲಕ್ಷ್ಮಿ ಯೋಜನೆಯಲ್ಲಿರುವ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಮುಂದಾಗಿದೆ. ಸಮಸ್ಯೆ ನಿವಾರಣೆಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಆಯೋಜಸಲು ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಆಯೋಜನೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಲಾಗಿದೆ. ಪಿಡಿಓಗಳ ನೇತೃತ್ವದಲ್ಲಿ ಕ್ಯಾಂಪ್ ಆಯೋಜನೆ ಆಗಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳಿಗೆ ಇರುವ ಸಮಸ್ಯೆ ಸರಿಪಡಿಸಲು ಸೂಚನೆ ನೀಡಲಾಗಿದೆ.

ಪುತ್ತೂರು ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್‌ ಗಳಲ್ಲಿ ಡಿ.27, 28, 29ರಂದು ಕ್ಯಾಂಪ್‌ ಆಯೋಜಿಸಲಾಗಿದ್ದು, ಇದರ ಸದುಪಯೋಗವನ್ನು ಪಡೆಯುವಂತೆ ಶಾಸಕ ಅಶೋಕ್‌ ಕುಮಾರ್‌ ರೈ ಮನವಿ ಮಾಡಿದ್ದಾರೆ. ಈ ಮೂರು ದಿನಗಳಲ್ಲಿ ಬೆಳಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಇರುವ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಖಾತೆಗೆ ಹಣ ಜಮೆ ಆಗದ ಫಲಾನುಭವಿಗಳು ಈ ಕ್ಯಾಂಪ್‌ ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಶಾಸಕರು ತಿಳಿಸಿದ್ದಾರೆ. ಕ್ಯಾಂಪ್‌ ಗೆ ರೇಶನ್‌ ಕಾರ್ಡ್‌, ಆಧಾರ್‌ ಕಾರ್ಡ್‌ ಮತ್ತು ಆಧಾರ್‌ ನಲ್ಲಿ ನಮೂದಿಸಲಾದ ಮೊಬೈಲ್‌ ಸಂಖ್ಯೆ ಇರುವ ಮೊಬೈಲ್ ನೊಂದಿಗೆ ತೆರಳುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here