ಸವಣೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕದಿಂದ ಕೊಡಮಾಡುವ 2023-24ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸವಣೂರು ಯುವಕಮಂಡಲದ ಅಧ್ಯಕ್ಷ ಜಿತಾಕ್ಷ.ಜಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಡಿ.30ರಂದು ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆಯಲಿದೆ.