ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲ್ಲೂಕು ಘಟಕ, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ, ತೆಂಕಿಲ, ವಿದ್ಯಾಭಾರತಿ ಉಚ್ಛ ಶಿಕ್ಷಾ ಸಂಸ್ಥಾನ, ಕರ್ನಾಟಕ, ಹಾಗೂ ರೇಡಿಯೋ ಪಾಂಚಜನ್ಯ 90.8 ಎಫ್. ಎಂ ಒಟ್ಟಾಗಿ ಭಾರತೀಯ ಭಾಷಾ ಉತ್ಸವದ ಪ್ರಯುಕ್ತ ಆಯೋಜಿಸಿದ ತಾಲೂಕು ಮಟ್ಟದ ಬಹುಭಾಷಾ ಕವಿಗೋಷ್ಠಿಯು ಡಿ.27ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಆಯುರ್ವೇದ ವೈದ್ಯರಾದ ಡಾ. ಹರಿಕೃಷ್ಣ ಪಾಣಾಜೆ ಅವರು ಜಿ.ಎಸ್.ಶಿವರುದ್ರಪ್ಪನವರ ಕವನದ ಮೂಲಕ ಕವಿಗೋಷ್ಠಿಯ ಆಶಯದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ಅಧ್ಯಕ್ಷರಾದ ಉಮೇಶ್ ನಾಯಕ್ ಪುತ್ತೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಆಡಳಿತ ಮಂಡಳಿ ಸಂಚಾಲಕರಾದ ಗಂಗಮ್ಮ ಹೆಚ್. ಶಾಸ್ತ್ರಿಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ವಸಂತ ಮಾಧವ ಉಪಸ್ಥಿತರಿದ್ದರು.
ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ಸ್ವಾಗತಿಸಿ, ರೇಡಿಯೋ ಪಾಂಚಜನ್ಯದ ಸದಸ್ಯೆ ಶಾಲಿನಿ ಆತ್ಮಭೂಷಣ್ ಧನ್ಯವಾದ ಸಲ್ಲಿಸಿದರು. ಈ ಕಾರ್ಯಕ್ರಮವನ್ನು ಸಹಾಯಕ ಪ್ರಾಧ್ಯಾಪಕಿಯರಾದ ರಾಜೀವಿ ನಾಗೇಶ್ ನಿರೂಪಿಸಿ , ಅನುರಾಧ ನಿರ್ವಹಿಸಿದರು. ನಂತರ ಸಾರ್ವಜನಿಕ ಮತ್ತು ವಿದ್ಯಾರ್ಥಿಗಳ ವಿಭಾಗದಲ್ಲಿ ಒಟ್ಟು 65 ಕವಿಗಳು ಸ್ವರಚಿತ ಕವನಗಳನ್ನು ವಾಚಿಸಿದರು.
ಈ ಸಂದರ್ಭದಲ್ಲಿ ಕ. ಸಾ. ಪ. ಪುತ್ತೂರಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಶಂಕರಿ ಶರ್ಮ ಹಾಗೂ ಶಾಂತಾ ಪುತ್ತೂರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಪ್ರಸನ್ನ ಭಟ್ ಬಲ್ನಾಡು ಹಾಗೂ ಬಾಲಕೃಷ್ಣ ನಾಯಕ್ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕಿಯರಾದ ಭುವನೇಶ್ವರಿ ಹಾಗೂ ಅಕ್ಷತಾ ನಡೆಸಿಕೊಟ್ಟರು.