




ಕಡಬ: ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಮಹಾಗಣಪತಿ ಕಾಂಪ್ಲೆಕ್ಸ್ನಲ್ಲಿ ಪದವಿ ಪೂರ್ವ ಕಾಲೇಜುಗಳ ನೌಕರರ ಸಹಕಾರ ಸಂಘದ 2ನೇ ಶಾಖೆ ಡಿ.29ರಂದು ಶುಭಾರಂಭಗೊಳ್ಳಲಿದೆ.
ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಸಂಚಾಲಕ ರೆ.ಫಾ. ಪ್ರಕಾಶ್ ಪೌಲ್ ಡಿಸೋಜಾ ಉದ್ಘಾಟಿಸಲಿದ್ದು, ಪ.ಪೂ. ಕಾಲೇಜುಗಳ ನೌಕರರ ಸಹಕಾರಿ ಸಂಘದ ಅಧ್ಯಕ್ಷ ಎನ್. ದುಗ್ಗಪ್ಪರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಮಹಮ್ಮದ್ ಕುಂಞ, ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಜಾರ್ಜ್ ಟ.ಎಸ್., ಸುಬ್ರಹ್ಮಣ್ಯೇಶ್ವರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಮಶೇಖರ ನಾಯಕ್, ಕೊಕ್ಕಡ ಸ,ಪ.ಪೂ.ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ರೈ ಪೆರ್ಲ, ಕಡಬ ಸ.ಪೂ.ಕಾಲೇಜಿನ ಪ್ರಾಂಶುಪಾಲ ವಾಸುದೇವ ಗೌಡ ಕೆ., ಪ್ರೌಢಶಾಲಾ ವಿಭಾಗದ ಮುಖ್ಯ ಗುರು ತೋಮಸ್ ಎ.ಕೆ. ಕಡಬ ತಾ. ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ, ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಮಂಗಳೂರು ಪ.ಪೂ. ನೌ.ಸ. ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ಕೆ. ಉಪಾಧ್ಯಾಯ, ಶ್ರೀ ಮಹಾಗಣಪತಿ ಕಾಂಪ್ಲೆಕ್ಸ್ ಮಾಲಕ ಸಂತೋಷ್ ಅವರುಗಳು ಗೌರವ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.











