ಶಿರಾಡಿ ಗ್ರಾ.ಪಂ.: ವಿಶೇಷ ಚೇತನರ ಸಮನ್ವಯ ಗ್ರಾಮಸಭೆ

0

ನೆಲ್ಯಾಡಿ: ಶಿರಾಡಿ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮಸಭೆಯು ಡಿ.21ರಂದು ಶಿರಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.


ಗ್ರಾ.ಪಂ.ಅಧ್ಯಕ್ಷರಾದ ಕಾರ್ತಿಕೇಯನ್ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಯಶವಂತ ಅವರು ದೀಪ ಬೆಳಗಿಸಿದರು.

ವಿಕಲಚೇತನರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಅಕ್ಷತಾ ಅವರು ಇಲಾಖೆಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ವನಿತಾರವರು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಟಿ.ಎಂ.ಅವರು ಆರೋಗ್ಯದ ಮಾಹಿತಿ ನೀಡಿದರು. ನೆಲ್ಯಾಡಿ ಹೊರಠಾಣೆಯ ಸಿಬ್ಬಂದಿ ನಾಗರಾಜ್‌ರವರು ದೌರ್ಜನ್ಯ ತಡೆ ಮತ್ತು ಸಂರಕ್ಷಣೆ ಬಗ್ಗೆ ವಿವರಿಸಿದರು. ಶಿರಾಡಿ ಗ್ರಾ.ಪಂ. ವಿಆರ್‌ಡಬ್ಲ್ಯೂ ಕಾರ್ಯಕರ್ತ ಸುನಿಲ್‌ರವರು ಮಾಶಾಸನ ಹಾಗೂ ಇತರೇ ಸಂಸ್ಥೆಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಿಕಲಚೇತನರು ತಯಾರಿಸಿದ ಅಲಂಕಾರಿಕ ವಸ್ತುಗಳನ್ನು ಪ್ರದರ್ಶಿಸಲಾಯಿತು. ಅವರಿಗೆ ಪ್ರೋತ್ಸಾಹಕ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಪಂಚಾಯತ್ ಸಿಬ್ಬಂದಿಗಳು, ವಿಕಲ ಚೇತನರು, ಸಂಜೀವಿನಿ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಶಾರದಾ ಪಿ.ಎ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಶವಂತ್‌ರವರು ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

LEAVE A REPLY

Please enter your comment!
Please enter your name here