‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಫಿ ಅನಾವರಣ

0

ದ.ಕ.ಜಿಲ್ಲೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿ- ಸಂಸದ ನಳಿನ್

ಮಂಗಳೂರು:ಬಂದರು, ವಿಮಾನ ಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದೆ.ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ.ಈ ವಿಭಿನ್ನತೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೇ ಮಾದರಿಯಾಗಿದೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜ.5ರಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ|ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಫಿ ಅನಾವರಣಗೊಳಿಸಿ ಅವರು ಮಾತನಾಡಿದರು.ಕಾರ್ಯಕ್ರಮ ಓಷಿಯನ್ ಪರ್ಲ್ ಹೊಟೇಲ್‌ನಲ್ಲಿ ನಡೆಯಿತು.


ಸಾಂಸ್ಕೃತಿಕ, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮುಂದುವರಿದಿರುವುದು ದಕ್ಷಿಣ ಕನ್ನಡ ಜಿಲ್ಲೆಯ ವಿಭಿನ್ನತೆಯಾಗಿದ್ದು ದೇಶದಲ್ಲಿ ಇಂತಹ ಸ್ವಚ್ಛ, ಸೌಹಾರ್ದತೆಯ ಮತ್ತೊಂದು ನಗರವನ್ನು ಕಾಣಲು ಸಾಧ್ಯವಿಲ್ಲ.ಇಂತಹ ನಾಡಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವುದು ಬ್ರ್ಯಾಂಡ್ ಮಂಗಳೂರಿಗೆ ಮತ್ತಷ್ಟು ಪೂರಕ ಎಂದು ಕಟೀಲ್ ಹೇಳಿದರು.


ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, 4 ವರ್ಷದ ಹಿಂದೆ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವನ್ನು ಯಶಸ್ವಿ, ಮಾದರಿಯಾಗಿ ನಡೆಸಿದ ಹೆಗ್ಗಳಿಕೆ ಪಡೆದುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಸಂಘಕ್ಕೆ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದ ಅವಕಾಶ ಸಿಕ್ಕಿರುವುದು ನಿಜಕ್ಕೂ ನಮಗೆ ಹೆಮ್ಮೆ.ಕ್ರಿಕೆಟ್ ಪಂದ್ಯಾಟ ಹಾಗೂ ಪತ್ರಕರ್ತರ ಮಹಾಸಭೆಗೆ ರಾಜ್ಯದ ನಾನಾ ಜಿಲ್ಲೆಯಿಂದ ಬರುವ ೬೦೦ಕ್ಕೂ ಅಽಕ ಪತ್ರಕರ್ತರು ಆಗಮಿಸುತ್ತಿದ್ದು ಅವರಿಗೆ ಆತಿಥ್ಯ ಸೇರಿದಂತೆ ಯಶಸ್ವಿ ಕ್ರೀಡಾಕೂಟ ಆಯೋಜಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.


ರೋಹನ್ ಕಾರ್ಪೊರೇಷನ್ ಛೇರ್ಮನ್ ರೋಹನ್ ಮೊಂತೆರೋ ಮಾತನಾಡಿ,ಪತ್ರಕರ್ತರ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆ ನಿಜಕ್ಕೂ ಚೆನ್ನಾಗಿದ್ದು, ಈ ಶೀರ್ಷಿಕೆಯಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಪತ್ರಕರ್ತರು ಬರುವ ಕಾರಣ ಮಂಗಳೂರಿನ ಬ್ರ್ಯಾಂಡ್ ಮತ್ತಷ್ಟು ವ್ಯಾಪ್ತಿಗೆ ಪಸರಿಸಲಿ. ಈ ಕ್ರೀಡಾಕೂಟಕ್ಕೆ ಟೈಟಲ್ ಪ್ರಾಯೋಜಕರಾಗಿ ಭಾಗವಹಿಸುವುದಕ್ಕೆ ನಮಗೂ ಹೆಮ್ಮೆ ಎನಿಸುತ್ತಿದೆ ಎಂದರು.


ಕಾರ್ಯಕ್ರಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ಕುಟ್ಟಪ್ಪ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್,ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ನಾಮ ನಿರ್ದೇಶಿತ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ತಾಂತ್ರಿಕ ಸಮಿತಿ ಸದಸ್ಯ ಅಜಯ್‌ರಾಜ್,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಪದಾಽಕಾರಿಗಳಾದ ವಿಲ್ರೆಡ್ ಡಿ ಸೋಜ, ರಾಜೇಶ್ ಕೆ ಪೂಜಾರಿ, ರಾಜೇಶ್ ದಡ್ಡಂಗಡಿ,ಮುಹಮ್ಮದ್ ಆರಿಫ್ ಪಡುಬಿದ್ರಿ, ವಿಜಯ ಕೋಟ್ಯಾನ್ ಪಡು,ಸುಖ್‌ಪಾಲ್ ಪೊಳಲಿ, ಸಂದೇಶ್ ಜಾರ,ರಾಜೇಶ್ ಶೆಟ್ಟಿ, ಮೊಹನ್ ಕುತ್ತಾರ್ ಮೊದಲಾದವರು ಉಪಸ್ಥಿತರಿದ್ದರು.ಪ್ರೆಸ್‌ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here